Advertisement

ರಾಜ್ಯದಲ್ಲಿ ಇಂದು ಮತ್ತೆ ಸಾವಿರ ಕೋವಿಡ್ ಸೋಂಕು ಪ್ರಕರಣ ದಾಖಲು ; 19 ಸೋಂಕಿತರು ಸಾವು

09:58 PM Jun 29, 2020 | Hari Prasad |

ಬೆಂಗಳೂರು: ನಿನ್ನೆಯಂತೆ ಇಂದೂ ಸಹ ರಾಜ್ಯದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಸಾವಿರ ದಾಟಿದೆ.

Advertisement

ರಾಜ್ಯ ರಾಜಧಾನಿಯನ್ನು ಒಳಗೊಂಡಿರುವ ಬೆಂಗಳೂರು ನಗರ ಜಿಲ್ಲೆಯಲ್ಲಿ 738 ಪ್ರಕರಣ ಸಹಿತ ರಾಜ್ಯದಲ್ಲಿ ಇಂದು ಒಟ್ಟಾರೆ 1105 ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ ಮತ್ತು ಇಂದು ಒಂದೇ ದಿನ ಕೋವಿಡ್ ಸೋಂಕಿನ ಕಾರಣದಿಂದ 19 ಜನ ಸಾವನ್ನಪ್ಪಿದ್ದಾರೆ.

ಇಂದೂ ಸಹ ಸೋಂಕಿತರ ಸಂಖ್ಯೆಯಲ್ಲಿ ಬೆಂಗಳೂರು ನಗರವೇ ಮುಂಚೂಣಿಯಲ್ಲಿರುವುದು ಆತಂಕಕ್ಕೆ ಕಾರಣವಾಗಿದೆ. ಇನ್ನುಳಿದಂತೆ ಬಳ್ಳಾರಿ, ದಕ್ಷಿಣ ಕನ್ನಡ, ಬಳ್ಳಾರಿ, ಬೀದರ್, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದಾರೆ.

ಇಂದು ರಾಜ್ಯದಲ್ಲಿ ಕೋವಿಡ್ 19 ಸೋಂಕಿಗೆ ಒಟ್ಟು 19 ಜನರು ಬಲಿಯಾಗಿದ್ದಾರೆ. ಬಳ್ಳಾರಿ ಜಿಲ್ಲೆಯೊಂದರಲ್ಲೇ ಇಂದು ಕೋವಿಡ್ ಸಂಬಂಧಿ 12 ಸಾವು ಸಂಭವಿಸಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 4 ಸಾವು ಸಂಭವಿಸಿದ್ದರೆ. ದಕ್ಷಿಣ ಕನ್ನಡ, ಬಾಗಲಕೋಟೆ, ಹಾಸನ ಜಿಲ್ಲೆಗಳಲ್ಲಿ ತಲಾ 01 ಸಾವು ಸಂಭವಿಸಿದೆ.

ರಾಜ್ಯದಲ್ಲಿ ಜೂನ್ 29 ಸೋಮವಾರದವರೆಗೆ 14295 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲುಗೊಂಡಿದೆ. ಮತ್ತು ಇವರಲ್ಲಿ 7683 ಸೋಂಕಿತರು ಗುಣಮುಖರಾಗಿದ್ದಾರೆ ಹಾಗೂ 6382 ಸಕ್ರಿಯ ಪ್ರಕರಣಗಳಿವೆ.

Advertisement

ರಾಜ್ಯದಲ್ಲಿ ಒಟ್ಟಾರೆಯಾಗಿ ಇದುವರೆಗೆ 226 ಜನ ಕೋವಿಡ್ 19 ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ. ಹಾಗೂ 4 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 268 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಇಂದೂ ಸಹ ಬೆಂಗಳೂರು ನಗರ ಜಿಲ್ಲೆಯಲ್ಲೇ ಅತೀ ಹೆಚ್ಚಿನ ಕೋವಿಡ್ 19 ಸೋಂಕಿತರು ಪತ್ತೆಯಾಗಿದ್ದಾರೆ. ಇಲ್ಲಿ ಇಂದು 738 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ಬಳ್ಳಾರಿ – 76, ದಕ್ಷಿಣ ಕನ್ನಡ – 32, ಬೀದರ್ – 28, ಉತ್ತರ ಕನ್ನಡ – 24, ಕಲಬುರಗಿ – 23, ಹಾಸನ – 22, ವಿಜಯಪುರ – 22, ತುಮಕೂರು – 18, ಉಡುಪಿ – 18, ಧಾರವಾಡ – 17, ಚಿಕ್ಕಮಗಳೂರು – 17 ಮತ್ತು ಚಿಕ್ಕಬಳ್ಳಾಪುರ – 15 ಇಷ್ಟು ಜಿಲ್ಲೆಗಳಲ್ಲಿ ಇಂದು ಎರಡಂಕೆಯ ಕೋವಿಡ್ 19 ಸೋಂಕು ಪತ್ತೆಯಾಗಿದೆ.

ರಾಜ್ಯದಲ್ಲಿ ಅತೀ ಹೆಚ್ಚಿನ ಕೋವಿಡ್ ಸೋಂಕಿತರೂ ಸಹ ಬೆಂಗಳೂರು ನಗರ ಜಿಲ್ಲೆಯಲ್ಲಿದ್ದಾರೆ. ಇಲ್ಲಿ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 4052ಕ್ಕೆ ಏರಿಕೆಯಾಗಿದ್ದು, 533 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ 3427 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಕೋವಿಡ್ ಸಂಬಂಧಿತ 91 ಸಾವುಗಳು ಸಂಭವಿಸಿದೆ.

ಇನ್ನುಳಿದಂತೆ ಕಲಬುರಗಿಯಲ್ಲಿ ಒಟ್ಟು 1421 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 1048 ಪ್ರಕರಣಗಳು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 355 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ 18 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ.

ಇನ್ನು ಉಡುಪಿ ಜಿಲ್ಲೆಯಲ್ಲಿ 1197 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1045 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ 150 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಸೋಂಕು ಸಂಬಂಧಿ 2 ಸಾವುಗಳು ಸಂಭವಿಸಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 697 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲಾಗಿದ್ದು ಇವರಲ್ಲಿ 384 ಸೋಂಕಿತರು ಗುಣಮುಖರಾಗಿದ್ದಾರೆ. 299 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ ಕೋವಿಡ್ ಸಂಬಂಧಿತ 12 ಸಾವು ಸಂಭವಿಸಿದೆ.

ಯಾದಗಿರಿ ಜಿಲ್ಲೆಯಲ್ಲಿ 939 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 822 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 116 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 1 ಸಾವು ಸಂಭವಿಸಿದೆ.

ರಾಜ್ಯಕ್ಕೆ ಇಂದು ಕಜಾಕಿಸ್ಥಾನ್ ನಿಂದ ಒಂದು ವಿಮಾನ ಬಂದಿಳಿದಿದ್ದು ಇದರಲ್ಲಿ 70 ಪ್ರಯಾಣಿಕರು ರಾಜ್ಯಕ್ಕೆ ಆಗಮಿಸಿದ್ದಾರೆ. ಇವರೆಲ್ಲರನ್ನೂ ತಪಾಸಣೆಗೊಳಪಡಿಸಲಾಗಿದೆ. ಈ ಮೂಲಕ ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಇದುವರೆಗೆ ಒಟ್ಟಾರೆ 152310 ಪ್ರಯಾಣಿಕರನ್ನು ತಪಾಸಣೆಗೊಳಿಸಲಾಗಿದೆ.

ರಾಜ್ಯದಲ್ಲಿ ಇಲ್ಲಿಯವರೆಗೆ ಒಟ್ಟು 605159 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು ಇವುಗಳಲ್ಲಿ 575337 ಮಾದರಿಗಳ ವರದಿ ನೆಗೆಟಿವ್ ಬಂದಿದೆ ಹಾಗೂ 14295 ವರದಿಗಳು ಪಾಸಿಟಿವ್ ಆಗಿವೆ. ಸೋಮವಾರದಂದು ಒಟ್ಟು 9689 ಮಾದರಿಗಳನ್ನು ತಪಾಸಣೆ ನಡೆಸಲಾಗಿದ್ದು ಇವುಗಳಲ್ಲಿ 8794 ವರದಿಗಳು ನೆಗೆಟಿವ್ ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next