Advertisement

Earthquake: ಚೀನಾದಲ್ಲಿ ಪ್ರಬಲ ಭೂಕಂಪ… 111 ಮಂದಿ ಸಾವು, 200 ಕ್ಕೂ ಹೆಚ್ಚು ಮಂದಿಗೆ ಗಾಯ

08:28 AM Dec 19, 2023 | sudhir |

ಬೀಜಿಂಗ್: ಚೀನಾದ ಗನ್ಸು-ಕಿಂಗ್ಹೈ ಗಡಿ ಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 111 ಜನರು ಸಾವನ್ನಪ್ಪಿದ್ದಾರೆ ಮತ್ತು 230 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Advertisement

ಮಾಹಿತಿ ಪ್ರಕಾರ ಸೋಮವಾರ ರಾತ್ರಿ 23:59 ಕ್ಕೆ ವಾಯುವ್ಯ ಚೀನಾದ ಗನ್ಸು ಪ್ರಾಂತ್ಯದಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಇದರಿಂದ ಕಟ್ಟಡಗಳು ನೆಲಸಮಗೊಂಡಿದ್ದು ಅವಶೇಷಗಳಡಿ ಹಲವು ಮಂದಿ ಸಿಲುಕಿದ್ದು ಅವರನ್ನು ರಕ್ಷಣಾ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು ಇದುವರೆಗೂ ಸುಮಾರು ನೂರಕ್ಕೂ ಅಧಿಕ ಮಂದಿ ಸಾವನ್ನಪಿರುವ ಕುರಿತು ವರದಿಯಾಗಿದೆ ಅಲ್ಲದೆ ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಚೀನಾದಲ್ಲಿ ಭೂಕಂಪನ ಸಂಭವಿಸುವ ಮುನ್ನ ಪಾಕಿಸ್ತಾನದಲ್ಲೂ ಪ್ರಬಲ ಭೂಕಂಪನದ ಅನುಭವವಾಗಿತ್ತು ಎಂದು ಮೂಲಗಳು ತಿಳಿಸಿವೆ.

ಚೀನಾದ ಸರ್ಕಾರಿ ಮಾಧ್ಯಮ ವರದಿಯ ಪ್ರಕಾರ, ಗನ್ಸು ಮತ್ತು ಕಿಂಗ್ಹೈ ಪ್ರಾಂತ್ಯಗಳಲ್ಲಿ ಸಂಭವಿಸಿದ ಭೂಕಂಪದಲ್ಲಿ ಕನಿಷ್ಠ 111 ಜನರು ಸಾವನ್ನಪ್ಪಿದ್ದಾರೆ. 230ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿದೆ. ಅಷ್ಟುಮಾತ್ರವಲ್ಲದೆ ಕೌಂಟಿ, ಡಯೋಜಿ ಮತ್ತು ಕಿಂಗ್ಹೈ ಪ್ರಾಂತ್ಯದಲ್ಲಿ ಭೂಕಂಪದಿಂದಾಗಿ ಗರಿಷ್ಠ ಹಾನಿ ಸಂಭವಿಸಿದೆ. ಇಲ್ಲಿ ಅನೇಕ ಕಟ್ಟಡಗಳು ಕುಸಿದು ಬಿದ್ದಿದ್ದರಿಂದ ಜನರು ಅವಶೇಷಗಳಡಿಯಲ್ಲಿ ಹೂತು ಹೋಗಿದ್ದು, ರಕ್ಷಣಾ ತಂಡಗಳು ಅವರನ್ನು ರಕ್ಷಿಸುವಲ್ಲಿ ನಿರತವಾಗಿವೆ. ಸತ್ತವರ ಮತ್ತು ಗಾಯಗೊಂಡವರ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಲಾಗಿದೆ.

ಭೂಕಂಪದ ಕೇಂದ್ರಬಿಂದುವು 35.7 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 102.79 ಡಿಗ್ರಿ ಪೂರ್ವ ರೇಖಾಂಶದಲ್ಲಿ 10 ಕಿಲೋಮೀಟರ್ ಆಳದಲ್ಲಿ ದಾಖಲಾಗಿದೆ ಎಂದು CENC ಹೇಳಿದೆ. ಅವಶೇಷಗಳಡಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಭರದಲ್ಲಿ ಸಾಗುತ್ತಿದ್ದು ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ ಅಲ್ಲದೆ ಹೆಚ್ಚಿನ ಸೇವೆಗಳಿಗಳಿಗಿ ಸಿಬಂದಿಗಳನ್ನು ನೇಮಿಸಲಾಗಿದೆ ಎಂದು ಹೇಳಲಾಗಿದೆ.

Advertisement

ಪಾಕಿಸ್ತಾನದಲ್ಲೂ ಕಂಪಿಸಿದ ಭೂಮಿ :
ಸೋಮವಾರ ಪಾಕಿಸ್ತಾನದಲ್ಲಿ 5.8 ತೀವ್ರತೆಯ ಭೂಕಂಪ ಸಂಭವಿಸಿದ್ದು. ಆದರೆ, ಯಾವುದೇ ಹಾನಿ ಅಥವಾ ಸಾವು ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ರಾಷ್ಟ್ರೀಯ ಭೂಕಂಪನ ಮಾನಿಟರಿಂಗ್ ಸೆಂಟರ್ (NSMC) ಮಾಹಿತಿ ಪ್ರಕಾರ, ಭೂಕಂಪವು 133 ಕಿಮೀ ಆಳದಲ್ಲಿ ಸಂಭವಿಸಿದೆ ಮತ್ತು ಅದರ ಕೇಂದ್ರಬಿಂದು ಭಾರತದ ಜಮ್ಮು ಮತ್ತು ಕಾಶ್ಮೀರವಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Kottigehara: ಅಬಕಾರಿ ದಾಳಿ, 100 ಲೀ. ಬೆಲ್ಲದ ಕೊಳೆ ಹಾಗೂ 5 ಲೀ. ಕಳ್ಳಬಟ್ಟಿ, ಪರಿಕರ ವಶ

 

Advertisement

Udayavani is now on Telegram. Click here to join our channel and stay updated with the latest news.

Next