Advertisement

ಕುಡಿಯುವ ನೀರಿಗೆ 112 ಕೋ.ರೂ. ಬಿಡುಗಡೆ: ಅಶೋಕ್‌

09:16 PM Apr 09, 2020 | Sriram |

ಬೆಂಗಳೂರು: ರಾಜ್ಯದಲ್ಲಿ ಬೇಸಗೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆಗಾಗಿ 112 ಕೋ. ರೂ. ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದರು.

Advertisement

ಸಂಪುಟ ಉಪ ಸಮಿತಿ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಎನ್‌ಡಿಆರ್‌ಎಫ್ ನಿಯಮದ ಪ್ರಕಾರ ರಾಜ್ಯದಲ್ಲಿ 49 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ. ಆರು ಜಿಲ್ಲೆಗಳ ತಾಲೂಕುಗಳಲ್ಲಿ 81 ಟ್ಯಾಂಕರ್‌ಗಳ ಮೂಲಕ ಮತ್ತು ಖಾಸಗಿ ಕೊಳವೆಬಾವಿ ಮೂಲಕ 271 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲಾಗುತ್ತಿದೆ. ಇನ್ನೂ 26 ವಾರಗಳಿಗೆ ದನಕರುಗಳಿಗೆ ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಲಾಗಿದೆ ಎಂದು ಹೇಳಿದರು.

ಬರಪೀಡಿತವೆಂದು ಘೋಷಣೆಯಾಗಿರುವ 49 ತಾಲೂಕುಗಳಿಗೆ ಪ್ರತಿ ತಾಲೂಕಿಗೆ 1 ಕೋ. ರೂ.ಗಳಂತೆ ಮತ್ತು ಉಳಿದ ತಾಲೂಕುಗಳಿಗೆ ತಲಾ 50 ಲ. ರೂ. ಗಳಂತೆ ಒಟ್ಟು 112 ಕೋ.ರೂ. ಬಿಡುಗಡೆಗೆ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next