Advertisement

114,53 ಲಕ್ಷ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆ: ಸಚಿವ ಪ್ರಭು ಚವ್ಹಾಣ್

08:03 PM Oct 02, 2020 | Mithun PG |

ಬೆಂಗಳೂರು, ರಾಜ್ಯದ ಎಲ್ಲ ಕೃಷಿ ವಿಜ್ಞಾನ ಕೇಂದ್ರಗಳು, ಗ್ರಾಮ ಪಂಚಾಯತ್, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ 114,53 ಲಕ್ಷ ಜಾನುವಾರುಗಳಿಗೆ ಅಕ್ಟೋಬರ್ 02, 2020ರಂದು ಕಾಲುಬಾಯಿ ರೋಗಕ್ಕೆ ಲಸಿಕೆ ನೀಡಲಾಗುತ್ತಿದೆ. 6303 ಸಿಬ್ಬಂದಿಗಳನ್ನು ಈ ಲಸಿಕಾ ಕಾರ್ಯಕ್ರಮಕ್ಕೆ ನಿಯೋಜಿಸಲಾಗಿದೆ. ರಾಜ್ಯದ ಎಲ್ಲ ರೈತರು ಮತ್ತು ಪಶುಪಾಲಕರು ಜಾನುವಾರು ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದು ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

Advertisement

ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ದಿನಾಂಕ 02.10.2020 ರಿಂದ 15-11-2020ರ ವರೆಗೆ ನಡೆಯುವ ಮೊದಲನೇ ಸುತ್ತಿನ ಕಾಲು ಬಾಯಿ ರೋಗ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರವನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪಶುಪಾಲನಾ ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಗಿದ್ದು, ಕರ್ತವ್ಯ ಲೋಪ ಆಗದಂತೆ ಎಚ್ಚರವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕೋವಿಡ ನೆಪ ಒಡ್ಡಿ ಅಧಿಕಾರಿಗಳು ಕರ್ತವ್ಯದಿಂದ ಜಾರಿಕೊಳ್ಳಲು ಪ್ರಯತ್ನಿಸುತ್ತಿರುವುದು ತಿಳಿದು ಬಂದಿದೆ. ಜಾನುವಾರು ಆರೋಗ್ಯದ ದೃಷ್ಟಿಯಿಂದ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ ಅತ್ಯಂತ ಮಹತ್ವದ ಲಸಿಕಾ ಕಾರ್ಯಕ್ರಮವಾಗಿದ್ದು, ಯಾವುದೇ ಜಿಲ್ಲೆಗಳಲ್ಲಿ ಇದಕ್ಕೆ ಹಿನ್ನಡೆಯಾದಲ್ಲಿ, ರೈತರ ಹಿತ ಕಾಪಾಡದ ಆಯಾ ಜಿಲ್ಲೆಯ ಅಧಿಕಾರಿಗಳ ವಿರುದ್ದ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾರತ ಸರ್ಕಾರದ “ಕೇಂದ್ರ ವಲಯದ ಕಾರ್ಯಕ್ರಮ”ವಾದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮಕ್ಕೆ ದಿನಾಂಕ 11.09.2020ರಂದು ಪ್ರಧಾನ ಮಂತ್ರಿ  ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next