Advertisement

ಭಾರತದಲ್ಲಿ 24ಗಂಟೆಯಲ್ಲಿ 11,703 ಕೋವಿಡ್ ಪ್ರಕರಣ ದೃಢ; ಲಕ್ಷದ ಸನಿಹಕ್ಕೆ ಸಕ್ರಿಯ ಪ್ರಕರಣ

12:04 PM Jun 28, 2022 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 11,793 ನೂತನ ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,34,18,839ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ಜೂನ್ 28) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಸಿದ್ದರಾಮಯ್ಯ ಅಮೃತ ಮಹೋತ್ಸವ: ಕಾಂಗ್ರೆಸ್ ನಾಯಕರಿಗೆ ನಡುಕ ಆರಂಭ!

ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 96,700ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಕೋವಿಡ್ ನಿಂದ 27 ಮಂದಿ ಸಾವನ್ನಪ್ಪಿದ್ದು, ಈವರೆಗೆ ಕೋವಿಡ್ ನಿಂದ ಒಟ್ಟು 5,25,047 ಜನರು ಸಾವನ್ನಪ್ಪಿದ್ದಾರೆ.

ದೇಶದಲ್ಲಿನ ಕೋವಿಡ್ ಚೇತರಿಕೆ ದರ ಶೇ.98.57ರಷ್ಟಿದೆ. 24 ಗಂಟೆಯಲ್ಲಿ ದೇಶದಲ್ಲಿ 2,280 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಭಾರತದಲ್ಲಿ ಪ್ರತಿದಿನದ ಪಾಸಿಟಿವಿಟಿ ದರ ಶೇ.2.49ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.3.36ರಷ್ಟಿದೆ. ದೇಶಾದ್ಯಂತ ಕೋವಿಡ್ ಸೋಂಕಿನಿಂದ ಈವರೆಗೆ 4,27,97,092 ಜನರು ಗುಣಮುಖರಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next