ಮಳೆಯ ಆರ್ಭಟ ಮುಂದುವರಿದಿದೆ. ಶನಿವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ
ಬೆಂಗಳೂರು ನಗರ ಜಿಲ್ಲೆಯ ಯಲಹಂಕದಲ್ಲಿ 11 ಸೆಂ.ಮೀ.ಗಳಷ್ಟು ಮಳೆ ಸುರಿಯಿತು.
Advertisement
ರಾಜಧಾನಿ ಬೆಂಗಳೂರಿನ ಹಲವೆಡೆ ಶನಿವಾರವೂ ಭಾರೀ ಮಳೆ ಸುರಿದಿದ್ದು, ಹಲವೆಡೆ ಮರ, ಕೊಂಬೆಗಳು ಧರೆಗುರುಳಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ನಗರವಾಸಿಗಳು ಪರದಾಡುವಂತಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗಿದೆ. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸತತ 2 ಗಂಟೆ ಕಾಲ ಸುರಿದ ಮಳೆಗೆ ವಿಮಾನ ನಿಲ್ದಾಣದ ಪಾರ್ಕಿಂಗ್ ಯಾರ್ಡ್‌ಗೆ ನೀರು ನುಗ್ಗಿತ್ತು. ದೇವನಹಳ್ಳಿ ತಾಲೂಕಿನ ಬುಳ್ಳಹಳ್ಳಿ ಗ್ರಾಮದ ಬಳಿ ಶಾಲಾ ವಾಹನವೊಂದು ಹಳ್ಳಕ್ಕೆ ಬಿದ್ದಿತ್ತು. ಅದೃಷ್ಟವಶಾತ್ ಮಕ್ಕಳಿಗೆ ಯಾವುದೇ ಹಾನಿ ಸಂಭವಿಸಿಲ್ಲ.
ಸುಳ್ಯ ತಾಲೂಕು ಪೈಕದಲ್ಲಿ ಸಿಡಿಲಿಗೆ ಹೈಟೆನ್ಶನ್ ತಂತಿಯೊಂದು ಕಡಿದು ರಿûಾದ ಮೇಲೆ ಬಿದ್ದಿದೆ. ಇದರಿಂದಾಗಿ
ರಿûಾ ಸಂಪೂರ್ಣ ಭಸ್ಮವಾಗಿದೆ. ಚಾಮರಾಜನಗರ, ಮೈಸೂರು ಜಿಲ್ಲೆಯ ಕೆಲವೆಡೆಯೂ ಮಳೆಯಾಗಿದ್ದು,
ನಂಜನಗೂಡು ತಾಲೂಕಿನ ಹೆಡತಲೆ ಗ್ರಾಮದಲ್ಲಿ 60ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. 6 ಗುಡಿಸಲುಗಳು
ನೆಲಸಮವಾಗಿವೆ. ಗುಂಡ್ಲು ನದಿಗೆ ಪ್ರವಾಹ ಬಂದಿದೆ. ಕೊಳ್ಳೇಗಾಲ ತಾಲೂಕಿನ ಉತ್ತಂಬಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಳೆಯ ನೀರು ನುಗ್ಗಿದೆ. ಹನೂರು ಸುತ್ತಮುತ್ತ ಬಿರುಗಾಳಿ ಮಳೆಗೆ 20ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿದ್ದು, ಒಂದೇ ಕುಟುಂಬ ಮೂವರು ಗಾಯಗೊಂಡಿದ್ದಾರೆ.
ರಾಜ್ಯದ ದಕ್ಷಿಣ ಒಳನಾಡಿನ ಹಲವೆಡೆ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.