Advertisement

50 ಸೆಂಟ್ಸ್‌ ಕಡಿಮೆ ವಿಸ್ತೀರ್ಣದ 11ಇ ನಕ್ಷೆ ಪ್ರಕ್ರಿಯೆ: ಯಶ್‌ಪಾಲ್‌ ಮನವಿ

10:59 PM Feb 19, 2024 | Team Udayavani |

ಬೆಂಗಳೂರು: ರಾಜ್ಯಾದ್ಯಂತ ಹಕ್ಕುಪತ್ರದಿಂದ ವಂಚಿತರಾಗಿರುವ ಅರ್ಹ ಕುಟುಂಬಗಳಿಗೆ ಹಕ್ಕು ಪತ್ರ ಒದಗಿಸುವ ನಿಟ್ಟಿನಲ್ಲಿ ಈಗ ಚಾಲ್ತಿಯಲ್ಲಿರುವ 2015ಕ್ಕಿಂತ ಪೂರ್ವದಿಂದ ವಾಸಿಯಾಗಿರುವ ದಾಖಲೆಯನ್ನು ಒದಗಿಸುವ ನಿಯಮವನ್ನು 2019ಕ್ಕೆ ಮಾರ್ಪಡಿಸಿ ಅರ್ಹ ಫ‌ಲಾನುಭವಿಗಳಿಗೆ ಅನುಕೂಲ ಮಾಡಿಕೊಡುವಂತೆ ಅಧಿವೇಶನದಲ್ಲಿ ಕಂದಾಯ ಸಚಿವರಿಗೆ ಶಾಸಕ ಯಶ್‌ಪಾಲ್‌ ಸುವರ್ಣ ಮನವಿ ಮಾಡಿದರು.

Advertisement

ಉಡುಪಿ ಜಿಲ್ಲೆಗೆ ಮಾತ್ರ ಅನ್ವಯಿಸುವಂತೆ ಜಿಲ್ಲಾಧಿಕಾರಿಗಳು ಹೊರಡಿಸಿರುವ 50 ಸೆಂಟ್ಸ್‌ಕ್ಕಿಂತ ಕಡಿಮೆ ವಿಸ್ತೀರ್ಣದಲ್ಲಿ 11ಇ ನಕ್ಷೆ ಪ್ರಕ್ರಿಯೆಯನ್ನು ಕೈಬಿಟ್ಟ ಆದೇಶದಿಂದ ಜಿಲ್ಲೆಯ ಜನತೆ ತೀವ್ರ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಸದನದಲ್ಲಿ ಪ್ರಸ್ತಾವಿಸಿ, ತತ್‌ಕ್ಷಣವೇ ಈ ಆದೇಶ ಹಿಂಪಡೆಯುವಂತೆ ಆಗ್ರಹಿಸಿದರು.

ರಾಜ್ಯದ ಆರ್ಥಿಕ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರವಹಿಸುವ ಸಹಕಾರಿ ಕ್ಷೇತ್ರಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ಸಹಕಾರಿ ಸಂಸ್ಥೆಗಳಲ್ಲಿ ಸರಕಾರಿ ಖಾತೆಗಳನ್ನು ತೆರೆಯುವ ಮೂಲಕ ಆರ್ಥಿಕ ಸಹಕಾರ, ಪ್ರತಿ ಜಿಲ್ಲೆಯಲ್ಲಿ ಸಹಕಾರಿ ನ್ಯಾಯಾಲಯ ಸ್ಥಾಪನೆ ಹಾಗೂ ವಿಧಾನ ಪರಿಷತ್ತಿನಲ್ಲಿ 4 ಸ್ಥಾನಗಳನ್ನು ಸಹಕಾರ ಕ್ಷೇತ್ರದ ಪ್ರತಿನಿಧಿಗಳಿಗೆ ಅವಕಾಶ ಕಲ್ಪಿಸಿ ಮುಂದಿನ ದಿನಗಳಲ್ಲಿ ಸಹಕಾರ ವ್ಯವಸ್ಥೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳುವಂತೆ ಪ್ರಸ್ತಾವಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next