Advertisement

ಕೋಟಾದಲ್ಲಿ 12 ಸೆಂ.ಮೀ.ಮಳೆ

11:11 PM Aug 24, 2019 | Team Udayavani |

ಬೆಂಗಳೂರು: ಶನಿವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿಯ ಎಲ್ಲೆಡೆ ಮತ್ತು ಒಳನಾಡಿನ ಹಲವೆಡೆ ಉತ್ತಮ ಮಳೆಯಾಯಿತು. ಕೋಟಾದಲ್ಲಿ ರಾಜ್ಯದಲ್ಲಿಯೇ ಅಧಿಕ ವೆನಿಸಿದ 12 ಸೆಂ.ಮೀ.ಮಳೆ ಸುರಿಯಿತು.

Advertisement

ಇದೇ ಅವಧಿಯಲ್ಲಿ ಪಣಂಬೂರಿನಲ್ಲಿ 9 ಸೆಂ.ಮೀ., ಮಂಗಳೂರು, ಮಂಗ ಳೂರು ವಿಮಾನ ನಿಲ್ದಾಣ, ಹೊನ್ನಾವರಗಳಲ್ಲಿ ತಲಾ 7 ಸೆಂ.ಮೀ., ಕುಂದಾಪುರ, ಕಾರವಾರಗಳಲ್ಲಿ ತಲಾ 6 ಸೆಂ.ಮೀ. ಮಳೆಯಾದ ವರದಿಯಾಗಿದೆ. ಸೋಮವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕರಾವಳಿಯ ಬಹುತೇಕ ಎಲ್ಲೆಡೆ, ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯಲ್ಲಿ ಆರೆಂಜ್‌ ಅಲರ್ಟ್‌: ಕರಾವಳಿ ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆ ಬಿರುಸುಗೊಂಡಿದೆ. ಆ.26 ಮತ್ತು 27ರಂದು ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ “ಆರೆಂಜ್‌ ಅಲರ್ಟ್‌’ ನೀಡಿದೆ. ಶನಿವಾರ ದ.ಕ.ಜಿಲ್ಲೆಯ ಅನೇಕ ಕಡೆಗಳಲ್ಲಿ ಉತ್ತಮ ಮಳೆಯಾಯಿತು. ಪುತ್ತೂರು, ಉಪ್ಪಿನಂಗಡಿ, ಬೆಳ್ತಂಗಡಿ, ಧರ್ಮಸ್ಥಳ, ಬಂಟ್ವಾಳ, ಉಳ್ಳಾಲ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉತ್ತಮ ಮಳೆಯಾದ ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next