Advertisement

ಶಿವಮೊಗ್ಗ: ಮಲೆನಾಡು ಜಿಲ್ಲೆಯಲ್ಲಿಂದು 12 ಕೋವಿಡ್-19 ಪ್ರಕರಣ ಪತ್ತೆ

06:51 PM Jun 07, 2020 | keerthan |

ಶಿವಮೊಗ್ಗ: ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಇಂದು ಮತ್ತೆ 12 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ದೃಢವಾಗಿದೆ. ಇದರಿಂದ ಜಿಲ್ಲೆಯ ಕೋವಿಡ್ ಸೋಂಕಿತರ ಸಂಖ್ಯೆ 65ಕ್ಕೆ ಏರಿಕೆಯಾಗಿದೆ.

Advertisement

ಇಂದು ಮಹಾರಾಷ್ಟ್ರದಿಂದ ಬಂದಿರುವ 12 ಜನರಲ್ಲಿ ಕೋವಿಡ್ ವೈರಸ್ ಕಾಣಿಸಿಕೊಂಡಿದ್ದು, ಏಳು ವರ್ಷ ಪ್ರಾಯದ ಗಂಡು ಮಗುವಿನಲ್ಲೂ ವೈರಸ್ ಕಾಣಿಸಿಕೊಂಡಿದೆ.

ಮಹಾರಾಷ್ಟ್ರದಿಂದ ಜಿಲ್ಲೆಗೆ ಬಂದಿದ್ದ ಇವರನ್ನು ಕ್ವಾರಂಟೈನ್ ನಲ್ಲಿಡಲಾಗಿತ್ತು. ಸದ್ಯ ಇವರಿಗೆ ಕೋವಿಡ್-19 ವೈರಸ್ ಕಾಣಿಸಿಕೊಂಡ ಹಿನ್ನಲೆಯಲ್ಲಿ  ಸೋಂಕಿತರನ್ನು ಚಿಕಿತ್ಸೆಗಾಗಿ ಕೋವಿಡ್ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದುವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ 65 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಆ 65 ಪ್ರಕರಣಗಳಲ್ಲಿ 28 ಜನರು ಕೋವಿಡ್ -19 ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಪ್ರಸ್ತುತ ಶಿವಮೊಗ್ಗ ಜಿಲ್ಲೆಯಲ್ಲಿ 37 ಕೋವಿಡ್-19 ಸಕ್ರಿಯ ಪ್ರಕರಣಗಳಿವೆ.

Advertisement

Udayavani is now on Telegram. Click here to join our channel and stay updated with the latest news.

Next