Advertisement

ಮುಂಬೈನಲ್ಲಿ ಕಟ್ಟಡ ಕುಸಿತ: 8 ಮಂದಿ ಸಾವು

05:10 AM Jul 26, 2017 | Karthik A |

ಮುಂಬೈ: ಮುಂಬೈನ ಘಟ್ಕೋಪರ್‌ನಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದು, ಕನಿಷ್ಠ 8 ಮಂದಿ ಮೃತಪಟ್ಟಿದ್ದಾರೆ. 30ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವ ಕಾರಣ, ಮೃತರ ಸಂಖ್ಯೆ ಹೆಚ್ಚಾಗುವ ಭೀತಿಯಿದೆ. 18 ಮಂದಿಯನ್ನು ಸುರಕ್ಷಿತವಾಗಿ ಮೇಲಕ್ಕೆತ್ತಲಾಗಿದೆ. ಈ ಕಟ್ಟಡದಲ್ಲಿ 15 ಕುಟುಂಬಗಳು ವಾಸಿಸುತ್ತಿದ್ದವು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದೇ ವೇಳೆ, ಕೋಲ್ಕತಾದಲ್ಲೂ 100 ವರ್ಷಗಳಷ್ಟು ಹಳೆಯ ಕಟ್ಟಡವೊಂದು ಭಾಗಶಃ ಕುಸಿದ ಕಾರಣ, ಇಬ್ಬರು ಮೃತಪಟ್ಟಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next