Advertisement

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : 12 ಮಂದಿ ದುರ್ಮರಣ

12:46 PM Jul 04, 2019 | Vishnu Das |

ಚಿಕ್ಕಬಳ್ಳಾಪುರ : ಚಿಂತಾಮಣಿಯ ಮುರುಗಮಲ್ಲ ಎಂಬಲ್ಲಿ ಖಾಸಗಿ ಬಸ್‌ ಮತ್ತು ಟಾಟಾ ಏಸ್‌ ನಡುವೆ ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ 12 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

Advertisement

ಅಪಘಾತದ ತೀವ್ರತೆಗೆ ಟಾಟಾ ಏಸ್‌ನಲ್ಲಿದ್ದ 11 ಮಂದಿ ಸ್ಥಳದಲ್ಲೆ ಸಾವನ್ನಪ್ಪಿದ್ದು, ಓರ್ವ ಆಸ್ಪತ್ರೆಗೆ ಸಾಗಿಸುವ ವೇಳೆ ಕೊನೆಯುಸಿರೆಳೆದಿರುವ ಬಗ್ಗೆ ವರದಿಯಾಗಿದೆ.

ಟಾಟಾ ಏಸ್‌ ಮುರುಗಮಲ್ಲದಿಂದ ಚಿಂತಾಮಣಿ ಗೆ ತೆರಳುತ್ತಿದ್ದು,
ಖಾಸಗಿ ಬಸ್‌ ಚಿಂತಾಮಣಿಯಿಂದ ಬೆಂಗಳೂರಿನ ಕಡೆ ತೆರಳುತ್ತಿತ್ತು.

ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಂತಾಮಣಿ , ಕೋಲಾರದ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಬಸ್‌ ಅತೀ ವೇಗವಾಗಿ ಚಲಿಸುತ್ತಿದ್ದು ಅಪಾಯಕಾರಿ ರಸ್ತೆಯಲ್ಲಿ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಮೃತರೆಲ್ಲರೂ ಚಿಂತಾಮಣಿಯ ಮುರುಗಮಲ್ಲ ಸುತ್ತಮುತ್ತಲಿನ ನಿವಾಸಿಗಳೇ ಆಗಿದ್ದು ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದವರು ಎಂದು ತಿಳಿದು ಬಂದಿದೆ.

ಅಪಘಾತದ ಬಳಿಕ ಬಸ್‌ ಚಾಲಕ ಮತ್ತು ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮೃತ ದೇಹಗಳನ್ನು ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ.

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next