Advertisement

ಗೋವಾ 12 ಶಾಸಕರ ಅನರ್ಹ ಪ್ರಕರಣ; ಡಿ.10 ಕ್ಕೆ ವಿಚಾರಣೆಯನ್ನು ಮುಂದೂಡಿದ ನ್ಯಾಯಾಲಯ

07:30 PM Nov 22, 2021 | Team Udayavani |

ಪಣಜಿ: ಗೋವಾದ ಕಾಂಗ್ರೆಸ್ ಮತ್ತು ಎಂಜಿಪಿ ಪಕ್ಷದಿಂದ ಬಿಜೆಪಿ ಸೇರಿದ್ದ 12 ಶಾಸಕರನ್ನು ಅನರ್ಹಗೊಳಿಸುವಂತೆ  ಮುಂಬಯಿ ಉಚ್ಛ ನ್ಯಾಯಾಲಯದ ಗೋವಾ ಪೀಠದಲ್ಲಿ ಸಲ್ಲಿಸಿದ್ದ ಪ್ರತ್ಯೇಕ ಎರಡು ಅರ್ಜಿಗಳ ವಿಚಾರಣೆಯನ್ನು ಸೋಮವಾರ ಕೈಗೆತ್ತಿಕೊಂಡ ನ್ಯಾಯಾಲಯವು ಈ ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ 10 ಕ್ಕೆ ಮುಂದೂಡಿದೆ.

Advertisement

ಡಿಸೆಂಬರ್ 10 ರಂದು ಈ ಎರಡೂ ಅರ್ಜಿಗಳ ಅಂತಿಮ ವಿಚಾರಣೆ ನಡೆಯಲಿದೆ.

ಮುಂಬಯಿ ಉಚ್ಛ ನ್ಯಾಯಾಲಯದ ಗೋವಾ ಪೀಠವು ಈ ಎರಡೂ ಅರ್ಜಿಗಳಲ್ಲಿ ನಮೂದಿಸಲಾಗಿರುವ 12 ಶಾಸಕರಿಗೆ ನೋಟಿಸ್ ಜಾರಿಗೊಳಿಸಿದ್ದು, ಇದಕ್ಕೆ ಉತ್ತರಿಸಲು ಡಿಸೆಂಬರ್ 6 ರವರೆಗೆ ಕಾಲಾವಕಾಶ ನೀಡಲಾಗಿದೆ, ಅರ್ಜಿದಾರರಿಗೆ ಉತ್ತರಿಸಲು ಡಿಸೆಂಬರ್ 9 ರ ವರೆಗೆ ಕಾಲಾವಕಾಶ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

2022 ರ ಫೆಬ್ರುವರಿಯಲ್ಲಿ ಗೋವಾ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಪ್ರಕರಣದ ತೀರ್ಪು ಶೀಘ್ರದಲ್ಲಿಯೇ ಹೊರ ಬೀಳುವ ಸಾಧ್ಯತೆಯಿದೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next