Advertisement

Road Mishap: ಕಂಟೈನರ್‌ಗೆ ಢಿಕ್ಕಿ ಹೊಡೆದ ಮಿನಿ ಬಸ್;‌ 12 ಮಂದಿ ದಾರುಣ ಅಂತ್ಯ

08:59 AM Oct 15, 2023 | Team Udayavani |

ಮಹಾರಾಷ್ಟ್ರ:  ಮಿನಿ ಬಸ್ಸೊಂದು ಕಂಟೈನರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 12 ಮಂದಿ ಮೃತಪಟ್ಟು, 23 ಮಂದಿ ಗಾಯಗೊಂಡಿರುವ ದಾರುಣ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ(ಅ.15 ರಂದು) ನಡೆದಿರುವುದು ವರದಿಯಾಗಿದೆ.

Advertisement

ಮುಂಬೈನಿಂದ ಸುಮಾರು 350 ಕಿಮೀ ದೂರದಲ್ಲಿರುವ ಜಿಲ್ಲೆಯ ಎಕ್ಸ್‌ಪ್ರೆಸ್‌ವೇಯ ವೈಜಾಪುರ ಪ್ರದೇಶದಲ್ಲಿ ಮಧ್ಯರಾತ್ರಿ 12.30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, 35  ಮಂದಿ ಪ್ರಯಾಣಿಕರನ್ನು ಹೊತ್ತುಕೊಂಡು ಹೋಗುತ್ತಿದ್ದ ಬಸ್‌ ನಿಯಂತ್ರಣ ಕಳೆದುಕೊಂಡ ಪರಿಣಾಮ ಈ ದುರಂತ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಚಾಲಕ ನಿಯಂತ್ರಣ ಕಳೆದುಕೊಂಡು ಕಂಟೈನರ್‌ ನ ಹಿಂಬದಿಗೆ ಹೋಗಿ ಢಿಕ್ಕಿ ಹೊಡೆದಿದ್ದಾನೆ. ಇದರಿಂದ ಬಸ್‌ ನಲ್ಲಿದ್ದ 12 ಮಂದಿ ಪ್ರಾಣ ಕಳೆದುಕೊಂಡಿದ್ದು ಮೃತರಲ್ಲಿ ಐವರು ಪುರುಷರು, ಆರು ಮಹಿಳೆಯರು ಮತ್ತು ಓರ್ವ ಅಪ್ರಾಪ್ತ ಬಾಲಕಿ ಸೇರಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿರುವುದಾಗಿ ಪಿಟಿಐ ವರದಿ ತಿಳಿಸಿದೆ.

ಇನ್ನು 23 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next