Advertisement

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

11:08 AM Apr 29, 2024 | Team Udayavani |

ಮುಂಬೈ: ರಸ್ತೆ ಬದಿಯ ಚಿಕನ್ ಶವರ್ಮಾ ಸೇವಿಸಿ ಕನಿಷ್ಠ 12 ಮಂದಿ ಆಸ್ಪತ್ರೆಗೆ ದಾಖಲಾದ ಘಟನೆ ಮುಂಬೈನಲ್ಲಿ ನಡೆದಿದೆ. ನಗರದ ಗೊರೆಗಾಂವ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಫುಡ್ ಪಾಯ್ಸನ್ ಅಸ್ವಸ್ಥತೆಗೆ ಕಾರಣವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Advertisement

ಆಸ್ಪತ್ರೆಗೆ ದಾಖಲಾಗಿದ್ದ 12 ಮಂದಿಯಲ್ಲಿ 9 ಜನರು ಈಗಾಗಲೇ ಡಿಸ್ಚಾರ್ಜ್ ಆಗಿದ್ದಾರೆ. ಮೂವರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಗೋರೆಗಾಂವ್ (ಪೂರ್ವ) ದ ಸಂತೋಷ್ ನಗರ ಪ್ರದೇಶದ ಸ್ಯಾಟಲೈಟ್ ಟವರ್‌ ನಲ್ಲಿ ಶುಕ್ರವಾರ ಚಿಕನ್ ಶವರ್ಮಾ ತಿಂದ ನಂತರ ಈ ಘಟನೆ ಸಂಭವಿಸಿದೆ ಎಂದು ಅವರು ಹೇಳಿದರು.

“ಶುಕ್ರವಾರ ಮತ್ತು ಶನಿವಾರದಂದು ಹನ್ನೆರಡು ಜನರು ವಿಷಾಹಾರದ ಬಗ್ಗೆ ದೂರು ನೀಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂಬತ್ತು ಜನರು ಡಿಸ್ಚಾರ್ಜ್ ಆಗಿದ್ದರೆ, ಇತರ ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಅಧಿಕಾರಿಯೊಬ್ಬರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next