Advertisement

ದಿಲ್ಲಿ ಕಾರ್ಯಕ್ರಮದಲ್ಲಿ ಬಳ್ಳಾರಿಯ 12 ಜನರು ಭಾಗಿ: ಆರು ಜನರನ್ನು ಪತ್ತೆಹಚ್ಚಿ ತಪಾಸಣೆಗೆ

04:33 PM Apr 01, 2020 | keerthan |

ಬಳ್ಳಾರಿ: ದೆಹಲಿಯ ನಿಜಾಮುದ್ದೀನ್ ಮರ್ಕಜಾ ಮಸೀದಿಯಲ್ಲಿ ಮಾ.10 ರಂದು ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಗಣಿನಾಡು ಬಳ್ಳಾರಿ ಜಿಲ್ಲೆಯಿಂದ 12 ಜನರು ಭಾಗವಹಿಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಈ ಕುರಿತು 170 ಜನರ ಹೆಸರಿರುವ ಪಟ್ಟಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಜಿಲ್ಲಾಡಳಿತ ಸ್ಪಷ್ಟನೆ ನೀಡಬೇಕಾಗಿದೆ. ಪಟ್ಟಿಯಲ್ಲಿ ಗುರುತಿಸಲಾಗಿರುವ ಜಿಲ್ಲೆಯ 12 ಜನರ ಪೈಕಿ 9 ಜನರು ಬಳ್ಳಾರಿ ನಗರ, ಒಬ್ಬ ಬಳ್ಳಾರಿ ತಾಲೂಕಿನ ಗಡಿಗ್ರಾಮಕ್ಕೆ ಸೇರಿದವರಾಗಿದ್ದಾರೆ. ಇನ್ನುಳಿದ ಇಬ್ಬರು ಸಿರುಗುಪ್ಪ, ಹೊಸಪೇಟೆ ಯವರಾಗಿದ್ದಾರೆ ಎಂಬುದು ಪಟ್ಟಿಯಲ್ಲಿ ನಮೂದಿಸಲಾಗಿರುವ ಮಾಹಿತಿ ಸ್ಪಷ್ಟಪಡಿಸುತ್ತದೆ.

ಕೋವಿಡ್-19 ವೈರಸ್ ಭೀತಿಯಿಂದಾಗಿ ದೆಹಲಿಯ ನಿಜಾಮುದ್ದೀನ್ ಮರ್ಕಜಾ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಎಂದು ಗುರುತಿಸಲಾಗಿರುವ 12 ಜನರ ಪೈಕಿ ಒಬ್ಬ ಈಗಾಗಲೇ ಸ್ವಯಂ ಪ್ರೇರಣೆಯಿಂದ ವೈದ್ಯಾಧಿಕಾರಿಗಳಿಗೆ ಸಹಕರಿಸಿ ತಪಾಸಣೆಗೆ ಒಳಗಾಗಿದ್ದಾನೆ. ಇನ್ನುಳಿದವರ ಪೈಕಿ ಮಂಗಳವಾರ ರಾತ್ರಿಯಿಡಿ ಹುಡುಕಾಟ ನಡೆಸಿರುವ ವೈದ್ಯಕೀಯ ಸಿಬ್ಬಂದಿಗಳು, ಐವರನ್ನು ಪತ್ತೆಹಚ್ಚಿ ಬುಧವಾರ ಜಿಲ್ಲಾಸ್ಪತ್ರೆಗೆ ಕರೆದೊಯ್ದು ತಪಾಸಣೆಗೆ ಒಳಪಡಿಸುವ ಮೂಲಕ ಒಟ್ಟು ಆರು ಜನರ ಗುರುತು ಪತ್ತೆಯಾದಂತಾಗಿದೆ. ಇನ್ನುಳಿದ ಆರು ಜನರನ್ನು ಪತ್ತೆ ಮಾಡುವಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಆರೋಗ್ಯ ಸಿಬ್ಬಂದಿಗಳು ನಿರತರಾಗಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.

ದೆಹಲಿಯ ನಿಜಾಮುದ್ದೀನ್ ಮರ್ಕಜಾ ಮಸೀದಿಯಲ್ಲಿನ ಧಾರ್ಮಿಕ ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲೆ ಸೇರಿ ರಾಜ್ಯದ ಕೋಲಾರ, ಬೀದರ್, ಬೆಳಗಾವಿ, ಬೆಂಗಳೂರು, ಬೀದರ್, ಮಂಡ್ಯ, ಮಂಗಳೂರು ಸೇರಿದಂತೆ ಹಲವಾರು ಜಿಲ್ಲೆಗಳಿಂದ ಭಾಗವಹಿಸಿದ್ದು, ಈಗಾಗಲೇ ತಮ್ಮ ತಮ್ಮ ಊರುಗಳು ಸೇರಿಕೊಂಡಿದ್ದಾರೆ. ಆದರೆ, ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರ ಮನವಿಯಂತೆ ದೆಹಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಸ್ವಯಂ ಪ್ರೇರಣೆಯಿಂದ ಮುಂದೆ ಬಂದು ತಪಾಸಣೆಗೆ ಒಳಗಾಗಬೇಕಾಗಿದೆ. ಇಲ್ಲದೇ, ನಿರ್ಲಕ್ಷ್ಯ ವಹಿಸಿದಲ್ಲಿ ಕೊರೊನಾ ಸೋಂಕು ರಾಜ್ಯದಲ್ಲಿ ಇನ್ನಷ್ಟು ಗಂಭೀರ ಪರಿಣಾಮ ತಾಳಿದರೂ ಅಚ್ಚರಿ ಪಡುವಂತಿಲ್ಲ ಎಂದು ಸಾರ್ವಜನಿಕರು ಆತಂಕ ಪಡುವಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next