Advertisement

ಮದ್ರಾಸ್​ ಐಐಟಿಯ 12 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢ

06:37 PM Apr 21, 2022 | Team Udayavani |

ಚೆನ್ನೈ : ದೇಶದಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಗರಿಗೆದರುತ್ತಿದ್ದು ಮದ್ರಾಸ್​ ಐಐಟಿಯಲ್ಲಿ ಕೋವಿಡ್ ಪ್ರಕರಣಗಳು ಬೆಳಕಿಗೆ ಬಂದಿವೆ. ಒಟ್ಟು 12 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃದಪಟ್ಟಿದೆ.

Advertisement

ವಿದ್ಯಾರ್ಥಿಗಳಲ್ಲಿ ಕೋವಿಡ್ ಪ್ರಕರಣ ದೃಢಪಟ್ಟ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ತಮ್ಮ ಕಚೇರಿಯ ಎಲ್ಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಪರೀಕ್ಷೆಗೊಳಪಡಿಸಲು ಸೂಚಿಸಿದ್ದಾರೆ.

ಕಾಲೇಜಿನ ಕೆಲ ವಿದ್ಯಾರ್ಥಿಗಳಲ್ಲಿ ಕೆಮ್ಮು, ಜ್ವರ ಇದ್ದ ಹಿನ್ನೆಲೆಯಲ್ಲಿ ಪರೀಕ್ಷೆಗೊಳಪಡಿಸಲಾಗಿತ್ತು ಇದರಲ್ಲಿ 12 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢ ಪಟ್ಟಿದೆ, ಈಗಾಗಲೇ ಸೋಂಕು ದೃಢಪಟ್ಟ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಡಳಿತ ಮಂಡಳಿ ಹೇಳಿದೆ.

ಕಳೆದ ಕೆಲವು ದಿನಗಳಿಂದ ದೆಹಲಿ, ಕೇರಳ, ಹರಿಯಾಣ, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ತೀವ್ರವಾಗಿ ಏರಿಕೆಯಾಗುತ್ತಿದೆ.

ತಮಿಳುನಾಡಿನಲ್ಲಿ ಬುಧವಾರ 31 ಹೊಸ ಕೋವಿಡ್ ಪ್ರಕರಣಗಳನ್ನು ವರದಿಯಾಗಿವೆ, ಹೆಚ್ಚುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯದ ಆರೋಗ್ಯ ಕಾರ್ಯದರ್ಶಿ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next