ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ಗೆ ಜೀವ ಬೆದರಿಕೆ ಕರೆಗಳು ಬಂದಿರುವುದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬುಧವಾರ ಸಂಜೆ ಪೊಲೀಸ್ ಪ್ರಧಾನ ಕಛೇರಿಯ ನಿಯಂತ್ರಣ ಕೊಠಡಿಗೆ ಕರೆಯೊಂದು ಬಂದಿದ್ದು ಅದರಲ್ಲಿ ಮಾತನಾಡಿದ ವ್ಯಕ್ತಿ ಮುಖ್ಯಮಂತ್ರಿಗೆ ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಕೂಡಲೇ ಎಚ್ಚೆತ್ತ ಸಿಬಂದಿ ಮುಖ್ಯಮಂತ್ರಿ ನಿವಾಸ ಹಾಗೂ ಕಚೇರಿ ಸುತ್ತಮುತ್ತ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದು ಅಲ್ಲದೆ ಬೆದರಿಕೆ ಹಿನ್ನೆಲೆಯಲ್ಲಿ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲು ಮಾಡಿತ್ತು.
ತಕ್ಷಣ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಎರ್ನಾಕುಲಂ ನಿಂದ ಕರೆ ಬಂದಿರುವುದು ಗೊತ್ತಾಗಿದೆ ಬಳಿಕ ವಿಳಾಸವನ್ನು ಪತ್ತೆ ಹಚ್ಚಿದ ಪೊಲೀಸರಿಗೆ ಶಾಕ್ ಆಗಿತ್ತು ಕಾರಣ ಮುಖ್ಯಮಂತ್ರಿಗಳ ಕಚೇರಿಗೆ ಬೆದರಿಕೆ ಕರೆ ಮಾಡಿರಿರುವುದು ಯಾವುದೇ ದುಷ್ಕರ್ಮಿಗಳು ಅಲ್ಲ ಬದಲಿಗೆ 12 ವರ್ಷದ ಬಾಲಕ ಎಂದು, ಈ ಕುರಿತು ಬಾಲಕನ ಪೋಷಕರ ಬಳಿ ಮಾತನಾಡಿದಾಗ ‘ತಮ್ಮ ಮಗ ಏಳನೇ ತರಗತಿಯ ವಿದ್ಯಾರ್ಥಿಯಾಗಿದ್ದು ಆತ ಫೋನ್‌ನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನಿಯಂತ್ರಣ ಕೊಠಡಿಗೆ ಕರೆ ಹೋಗಿದೆ. ಇದರಿಂದ ನಿಯಂತ್ರಣ ಕೊಠಡಿಯ ಅಧಿಕಾರಿಗಳು ಬಾಲಕನ ಕರೆಯನ್ನು ತಪ್ಪಾಗಿ ಗ್ರಹಿಸಿ ಬೆದರಿಕೆ ಹಾಕುವ ಉದ್ದೇಶದಿಂದ ಕರೆ ಮಾಡಲಾಗಿದೆ ಎಂದು ಗ್ರಹಿಸಿ ಹೆಚ್ಚಿನ ಬಂದೊಬಸ್ತ್ ಏರ್ಪಡಿಸಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಸದ್ಯ ಪ್ರಕರಣ ದಾಖಲಿಸಿಕೊಂಡ ಮ್ಯೂಸಿಯಂ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಇದನ್ನೂ ಓದಿ: Israel War: ತಾಲಿಬಾನ್ ಗಳಿಗೆ ಹನುಮಂತನ ಗದೆಯೇ ಪರಿಹಾರ: ಸಿಎಂ ಯೋಗಿ ಆದಿತ್ಯನಾಥ್