Advertisement

ಗಣೇಶ ಹಬ್ಬಕ್ಕೆ 1200 ಹೆಚ್ಚುವರಿ ಬಸ್‌

12:14 PM Sep 08, 2018 | |

ಬೆಂಗಳೂರು: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) 1,200 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. 

Advertisement

ಸೆ.11 ಹಾಗೂ 12ರಂದು ಬೆಂಗಳೂರಿನಿಂದ ರಾಜ್ಯ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಗೆ ಈ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಅದೇ ರೀತಿ, ಸೆ.16ರಂದು ಬೇರೆ ಬೇರೆ ಸ್ಥಳಗಳಿಂದ ಬೆಂಗಳೂರಿಗೆ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಸಂಚರಿಸಲಿವೆ. 

ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌, ತಿರುಪತಿ ಮುಂತಾದ ಸ್ಥಳಗಳಿಗೆ ತೆರಳಲಿವೆ.

ಅದೇ ರೀತಿ, ಮೈಸೂರು ರಸ್ತೆ ಬಸ್‌ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ಮಾಡುತ್ತವೆ. ತಮಿಳುನಾಡು ಮತ್ತು ಆಂಧ್ರಪ್ರದೇಶ/ ತೆಲಂಗಾಣ ಕಡೆಗೆ ಹೋಗುವ ಪ್ರೀಮಿಯಂ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಕೇಂದ್ರ ಘಟಕ-4 ಮತ್ತು ಘಟಕ-2 ರ ಮುಂಭಾಗದಿಂದ ಹೊರಡಲಿವೆ.

ಪೀಣ್ಯ ಬಸವೇಶ್ವರ ಬಸ್‌ ನಿಲ್ದಾಣ, ಜಯನಗರ, ಜಯನಗರ 4ನೇ ಬ್ಲಾಕ್‌, ಜಾಲಹಳ್ಳಿ ಕ್ರಾಸ್‌, ನವರಂಗ್‌ (ರಾಜಾಜಿನಗರ), ಮಲ್ಲೇಶ್ವರ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ್‌ ಭೀಮಾನಗರ, ಐಟಿಐ ಗೇಟ್‌, ಗಂಗಾನಗರ, ಕೆಂಗೇರಿ ಉಪನಗರ, ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

Advertisement

ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್‌ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾದ ಟಿಕೆಟ್‌ಗಳ ಮೇಲೆ ನಮೂದಿಸಲಾಗಿರುವ ಬಸ್‌ ನಿಲ್ದಾಣ/ಪಿಕ್‌ಅಪ್‌ ಪಾಯಿಂಟ್‌ನ ಹೆಸರನ್ನು ಗಮನಿಸಬೇಕು. ಇ-ಟಿಕೆಟ್‌ ಬುಕಿಂಗ್‌ಗೆ ವೆಬ್‌ಸೈಟ್‌: www.ksrtc.in ಮೂಲಕ ಪಡೆಯಬಹುದು. ಜತೆಗೆ 707 ಗಣಕೀಕೃತ ಬುಕಿಂಗ್‌ ಕೌಂಟರ್‌ಗಳ ವ್ಯವಸ್ಥೆಯನ್ನೂ ಮಾಡಲಾಗಿದೆ. 

ನಾಲ್ವರು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಿದಲ್ಲಿ ಶೇ. 5ರಷ್ಟು ರಿಯಾಯ್ತಿ ನೀಡಲಾಗುವುದು ಹಾಗೂ ಹೋಗಿಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ‌ ಪ್ರಯಾಣ ದರದಲ್ಲಿ ಶೇ. 10ರಷ್ಟು ರಿಯಾಯ್ತಿ ನೀಡಲಾಗುವುದು. ಅಲ್ಲದೆ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ ಜಿಲ್ಲಾ ಬಸ್‌ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು.

Advertisement

Udayavani is now on Telegram. Click here to join our channel and stay updated with the latest news.

Next