Advertisement

ಯೋಗ ಕಾರ್ಯಕ್ರಮಕ್ಕೆ 12 ಸಾವಿರ ನೋಂದಣಿ: ಸಚಿವ ಸೋಮಶೇಖರ್‌

11:56 PM Jun 14, 2022 | Team Udayavani |

ಮೈಸೂರು: ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸುತ್ತಿದ್ದು, ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಇದಕ್ಕಾಗಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ ತಿಳಿಸಿದರು.

Advertisement

ಮಂಗಳವಾರ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, ಯೋಗ ದಿನಾಚರಣೆ ಕಾರ್ಯಕ್ರಮದ ಉನ್ನತ ಸಮಿತಿಗೆ ನಾನು ಅಧ್ಯಕ್ಷನಾದರೆ ಆರೋಗ್ಯ ಸಚಿವ ಡಾ| ಕೆ. ಸುಧಾಕರ್‌ ಉಪಾಧ್ಯಕ್ಷರಾಗಿದ್ದಾರೆ. ಉಳಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಸಮಿತಿಯಲ್ಲಿದ್ದಾರೆ ಎಂದು ಹೇಳಿದರು.

ಅರಮನೆ ಆವರಣದಲ್ಲಿ ನಡೆಯುವ ಕಾರ್ಯಕ್ರಮಕ್ಕೆ 15 ಸಾವಿರ ಮಂದಿಗೆ ಅವಕಾಶ ನೀಡುತ್ತಿದ್ದು, ಈ ಪೈಕಿ ರಾಜ್ಯ ಸರಕಾರದಿಂದ 12 ಸಾವಿರ, ಉಳಿದ 3 ಸಾವಿರ ಮಂದಿ ಕೇಂದ್ರ ಸರಕಾರದಿಂದ ಪ್ರತಿನಿಧಿಸುತ್ತಿದ್ದಾರೆ ಎಂದರು.

2 ಡೋಸ್‌ ಕಡ್ಡಾಯ
ಆರೋಗ್ಯ ಸಚಿವ ಡಾ| ಕೆ.ಸುಧಾಕರ್‌ ಮಾತನಾಡಿ, ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚಳವಾಗುತ್ತಿರುವುದರಿಂದ ಯೋಗ ದಿನಾಚರಣೆಗೆ ತಾಂತ್ರಿಕ ಸಲಹಾ ಸಮಿತಿಯಿಂದ ಒಪ್ಪಿಗೆ ಸಿಕ್ಕಿದೆ. ಮುಂಜಾಗ್ರತ ಕ್ರಮವಾಗಿ ಯೋಗದಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ 2 ಡೋಸ್‌ ಲಸಿಕೆ ಪಡೆದಿರಬೇಕು. ಇಲ್ಲವಾದಲ್ಲಿ 72 ಗಂಟೆಗಳ ಆರ್‌ಟಿಪಿಸಿಆರ್‌ ವರದಿ ತರಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next