Advertisement

ಸಾಕ್ಸ್‌, ಶೂ ಖರೀದಿಗೆ 121 ಕೋಟಿ ರೂ. ಬಿಡುಗಡೆ

08:06 PM May 30, 2024 | Team Udayavani |

ಬೆಂಗಳೂರು: ರಾಜ್ಯ ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ 1 ಜತೆ ಶೂ, 2 ಜತೆ ಸಾಕ್ಸ್‌ ಖರೀದಿಗೆ ಸರ್ಕಾರವು 121 ಕೋಟಿ ರೂ. ಬಿಡುಗಡೆಗೊಳಿಸಿದೆ. ಸ್ಥಳೀಯ ವಾತಾವರಣಕ್ಕೆ ಅನುಗುಣವಾಗಿ ಶೂ ಮತ್ತು ಸಾಕ್ಸ್‌ಗಳ ಬದಲು ಪಾದರಕ್ಷೆ ಖರೀದಿಸಬಹುದು ಎಂದು ತಿಳಿಸಲಾಗಿದೆ.

Advertisement

ಅರ್ಹ ವಿದ್ಯಾರ್ಥಿಗಳ ಪಾದರಕ್ಷೆಗಳ ಅಳತೆ ದಾಖಲಿಸಿ ಉತ್ತಮ ಗುಣಮಟ್ಟದ ಪಾದರಕ್ಷೆಗಳನ್ನು ಸ್ಥಳೀಯವಾಗಿ ಖರೀದಿಸಿ ವಿತರಿಸಲು ಸಂಬಂಧಿಸಿದ ಶಾಲೆಯ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ)ಗೆ ಜವಾಬ್ದಾರಿ ವಹಿಸಲಾಗಿದೆ. 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ 265 ರೂ., 6 ರಿಂದ 8ನೇ ತರಗತಿಗೆ 295 ರೂ. ಹಾಗೂ 9 ಮತ್ತು 10ನೇ ತರಗತಿಗೆ 325 ರೂ.ಗಳನ್ನು ನಿಗದಿಪಡಿಸಲಾಗಿದೆ.

ಶೂ ಮತ್ತು ಸಾಕ್ಸ್‌ ಖರೀದಿಸುವ ಮೊದಲು ಎಸ್‌ಡಿಎಂಸಿ ಅಧ್ಯಕ್ಷರ ಅಧಕ್ಷತೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕರು, ಮೂವರು ಎಸ್‌ಡಿಎಂಸಿ ಸದಸ್ಯರಿರುವ ಸಮಿತಿ ರಚಿಸಬೇಕು. ಹಿಂದಿನ ಸಾಲಿನಲ್ಲಿ ಕಳಪೆ ಶೂ ಮತ್ತು ಸಾಕ್ಸ್‌ ಖರೀದಿಸಿರುವ ಬಗ್ಗೆ ದೂರುಗಳಿವೆ. ಆದ್ದರಿಂದ ಖರೀದಿ ಪ್ರಕ್ರಿಯೆಯಲ್ಲಿ ಎಚ್ಚರಿಕೆ ವಹಿಸುವಂತೆ ಶಾಲಾ ಶಿಕ್ಷಣ ಆಯುಕ್ತರು ಹೊರಡಿಸಿರುವ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next