Advertisement

12,166 ಪರೀಕ್ಷಾರ್ಥಿಗಳು ಹಾಜರು

07:00 AM Jun 19, 2020 | Suhan S |

ಬೀದರ: ನಗರದ ಸೇರಿದಂತೆ ಜಿಲ್ಲಾದ್ಯಂತ ಗುರುವಾರ ದ್ವಿತೀಯ ಪಿಯು ಇಂಗ್ಲಿಷ್‌ ವಾರ್ಷಿಕ ಪರೀಕ್ಷೆ ಶಾಂತಿಯುತವಾಗಿ ನಡೆಯಿತು. ಕೋವಿಡ್ ಸೋಂಕಿನ ಆತಂಕದ ನಡುವೆ ವಿದ್ಯಾರ್ಥಿಗಳು ಬಾಕಿಯಿದ್ದ ಇಂಗ್ಲಿಷ್‌ ಪರೀಕ್ಷೆ ಬರೆದರು.

Advertisement

ಜಿಲ್ಲೆಯ ಒಟ್ಟು 33 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪರೀಕ್ಷೆಗೆ 13,065 ವಿದ್ಯಾರ್ಥಿಗಳ ಪೈಕಿ 12,166 ವಿದ್ಯಾರ್ಥಿಗಳು ಹಾಜರಾಗಿದ್ದು, 899 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕೋವಿಡ್ ಮುಂಜಾಗ್ರತಾ ಕ್ರಮವಾಗಿ 126 ಹೆಚ್ಚುವರಿ ಸೇರಿ ಒಟ್ಟಾರೆ 626 ಪರೀಕ್ಷಾ ಕೋಣೆಗಳ ವ್ಯವಸ್ಥೆ ಮಾಡಲಾಗಿತ್ತು. ದೊಡ್ಡ ಕೋಣೆಯಲ್ಲಿ 30ರ ಬದಲು 24 ಮಕ್ಕಳು, ಸಣ್ಣ ಕೋಣೆಯಲ್ಲಿ 18ರ ಬದಲು 12 ಮಕ್ಕಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಯಿತು.

ಪರೀಕ್ಷಾ ಕೇಂದ್ರವಾಗಿದ್ದ ನಗರದ ಬಿ.ವಿ.ಭೂಮರೆಡ್ಡಿ ಕಾಲೇಜಿಗೆ ಗುರುವಾರ ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌, ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ ಮತ್ತು ಎಸ್‌ಪಿ ಡಿ.ಎಲ್‌. ನಾಗೇಶ ಭೇಟಿ ನೀಡಿ ಪರಿಶೀಲಿಸಿದರು. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ನಡೆಸಿದ ವೈದ್ಯಕೀಯ ತಪಾಸಣೆ ಬಗ್ಗೆ ಡಿಸಿ, ಪರೀಕ್ಷಾ ಕೇಂದ್ರದ ಬಾಗಿಲಿನಲ್ಲಿ ಹಾಜರಿದ್ದ ವೈದ್ಯಕೀಯ ಸಿಬ್ಬಂದಿಯಿಂದ ಮಾಹಿತಿ ಪಡೆದರು. ಥರ್ಮಲ್‌ ಸ್ಕ್ರೀನಿಂಗ್‌ ವೇಳೆ ಯಾವುದೇ ವಿದ್ಯಾರ್ಥಿಗಳಿಗೆ ಕೋವಿಡ್‌ -19 ಲಕ್ಷಣಗಳು ಕಂಡುಬಂದಿಲ್ಲ ಎಂದು ಸಿಬ್ಬಂದಿ ಮಾಹಿತಿ ನೀಡಿದರು.

ಡಿಸಿ, ಸಿಇಒ ಮತ್ತು ಎಸ್‌ಪಿ ಅವರಿಗೂ ಅಲ್ಲಿನ ವೈದ್ಯಕೀಯ ಸಿಬ್ಬಂದಿ ಉಷ್ಣತೆ ಪರಿಶೀಲಿಸಿದರು. ಪರೀಕ್ಷೆಗೆ ಹಾಜರಾದ ಯಾವುದೇ ವಿದ್ಯಾರ್ಥಿಗಳಲ್ಲಿ ಕೋವಿಡ್‌-19 ಲಕ್ಷಣಗಳು ಕಂಡು ಬಂದಿಲ್ಲ ಎಂದು ಜಿಲ್ಲಾಧಿಕಾರಿಗಳು ಮಾಧ್ಯಮದವರಿಗೆ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next