Advertisement

Belthangady: 125 ಕೆ.ಜಿ. ರಕ್ತ ಚಂದನ ಸಾಗಾಟ ಪತ್ತೆ

12:17 AM Aug 12, 2023 | Team Udayavani |

ಬೆಳ್ತಂಗಡಿ: ವೇಣೂರು ಸಮೀಪ ಕರಿಮಣೇಲು ಎಂಬಲ್ಲಿ ಬೆಂಗಳೂರು ಸಿಐಡಿ ಪೊಲೀಸ್‌ ಅರಣ್ಯ ಘಟಕದ (ಎಫ್.ಎಂ.ಎಸ್‌.) ತಂಡವು 125 ಕೆ.ಜಿ. ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರಕ್ತ ಚಂದನ ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದು ವೇಣೂರು ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ.

Advertisement

ರಕ್ತ ಚಂದನ ಸಾಗಾಟ ಮಾಡಿದ ಆರೋಪಿತರಾದ ಬಂಟ್ವಾಳ ತಾಲೂಕಿನ ಮಾವಿನಕಟ್ಟೆ ನಿವಾಸಿ ಖಾಲಿದ್‌ ಹಾಗೂ ಗುರುವಾಯನಕೆರೆ ನಿವಾಸಿ ದೀಕ್ಷಿತ್‌ ಇಬ್ಬರನ್ನು ಬಂಧಿಸಲಾಗಿದೆ. ಮತ್ತೋರ್ವ ಆರೋಪಿ ಸಂತೋಷ್‌ ತಲೆಮರೆಸಿಕೊಂಡಿದ್ದಾನೆ.

ಬೆಳ್ತಂಗಡಿ ತಾಲೂಕಿನ ವೇಣೂರು ವ್ಯಾಪ್ತಿಯ ಕರಿಮಣೇಲು ಎಂಬಲ್ಲಿಂದ ಅಕ್ರಮವಾಗಿ ರಕ್ತಚಂದನ ಸಾಗಾಟ ನಡೆಸಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಸಿಐಡಿ ಪೊಲೀಸ್‌ ಅರಣ್ಯ ಸಂಚಾರಿ ದಳದ ಮಂಗಳೂರು ವಿಭಾಗದ ಉಪನಿರೀಕ್ಷಕಿ ಜಾನಕಿ ಮತ್ತು ತಂಡ ಆರೋಪಿಗಳು ಸಹಿತ 125 ಕೆ.ಜಿ. ರಕ್ತಚಂದನ ಸಾಗಾಟಕ್ಕೆ ಬಳಸಿದ ವಾಹನ ವಶಕ್ಕೆಪಡೆದಿದ್ದಾರೆ. ಹೆಚ್ಚಿನ ತನಿಖೆಗಾಗಿ ಪ್ರಕರಣ ವೇಣೂರು ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಿದ್ದು, ವೇಣೂರು ವಲಯ ಅರಣ್ಯಾಧಿಕಾರಿ ಮಹೀಮ್‌ ಜನ್ನು ತಂಡ ಪ್ರಕರಣ ಕೈಗೆತ್ತಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 6.50 ಲಕ್ಷ ರೂ.ಗಿಂತ ಅಧಿಕ ಎಂದು ಅಂದಾಜಿಸಲಾಗಿದೆ..

 

Advertisement

Udayavani is now on Telegram. Click here to join our channel and stay updated with the latest news.

Next