Advertisement

HDFC Bankಗೆ 12,594 ಕೋ.ರೂ. ನಿವ್ವಳ ಲಾಭ

08:32 PM Apr 15, 2023 | Team Udayavani |

ಮುಂಬೈ: 2023ರ ಮಾರ್ಚ್‌ ತ್ರೈಮಾಸಿಕದಲ್ಲಿ ಎಚ್‌ಡಿಎಫ್ಸಿ ಬ್ಯಾಂಕ್‌ 12,594.47 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಕಳೆದ ವರ್ಷ ಇದೇ ತ್ರೈಮಾಸಿಕಕ್ಕೆ ಹೋಲಿಸಿದರೆ ಬ್ಯಾಂಕ್‌ ಲಾಭದಲ್ಲಿ ಶೇ. 20.60ರಷ್ಟು ಏರಿಕೆ ಆಗಿದೆ. ಕಳೆದ ವರ್ಷದ ಜನವರಿ-ಮಾರ್ಚ್‌ ತ್ರೈಮಾಸಿಕದಲ್ಲಿ 10,443.01 ಕೋಟಿ ರೂ. ಹಾಗೂ ಅದರ ಹಿಂದಿನ ಡಿಸೆಂಬರ್‌ ತ್ರೈಮಾಸಿಕದಲ್ಲಿ 12,698.32 ಕೋಟಿ ರೂ. ನಿವ್ವಳ ಲಾಭ ಗಳಿಸಿತ್ತು.

Advertisement

ಇದೇ ವೇಳೆ 2023ರ ಹಣಕಾಸು ವರ್ಷದಲ್ಲಿ ಬ್ಯಾಂಕ್‌ 45,997.11 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. 2022 ಹಣಕಾಸು ವರ್ಷದಲ್ಲಿ 38,052.75 ಕೋಟಿ ರೂ. ನಿವ್ವಳ ಲಾಭ ಗಳಿಸಿತ್ತು ಎಂದು ಎಚ್‌ಡಿಎಫ್ಸಿ ಬ್ಯಾಂಕ್‌ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next