Advertisement

ಹಾಸನ: 127 ಜನರಿಗೆ ಕೋವಿಡ್-19 ಸೋಂಕು ದೃಢ, 9 ಮಂದಿ ಸೋಂಕಿತರು ಸಾವು

05:55 PM Aug 07, 2020 | keerthan |

ಹಾಸನ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ದಿನದಿಂದ ದಿನಕ್ಕೆ ತನ್ನ ಪ್ರಭಾವವನ್ನು ಹೆಚ್ಚಿಸುತ್ತಿದೆ. ಜಿಲ್ಲೆಯಲ್ಲಿ ಇಂದು 127 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಂಬತ್ತು ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

Advertisement

ಜಿಲ್ಲೆಯ ಇಂದಿನ 127 ಹೊಸ ಕೋವಿಡ್ ಪ್ರಕರಣಗಳ ಕಾರಣದಿಂದ ಒಟ್ಟು ಸೋಂಕಿತರ ಸಂಖ್ಯೆ 3158ಕ್ಕೆ ಏರಿಕೆಯಾಗಿದೆ. ಇವರಲ್ಲಿ ಶೇ.39ರಷ್ಟು ಮಂದಿ ಅಂದರೆ 1247 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇನ್ನೂ 1823 ಸಕ್ರಿಯ ಪ್ರಕರಣಗಳಿದ್ದು, ಅವರಿಗೆ ಚಿಕಿತ್ಸೆ ಮುಂದುವರಿದಿದೆ.

ಜಿಲ್ಲೆಯಲ್ಲಿ ಇಂದು ಒಂಬತ್ತು ಜನ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ. ಇದರಿಂದ ಜಿಲ್ಲೆಯ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ 88 ಕ್ಕೆ ಏರಿಕೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next