Advertisement
ರಾಜ್ಯದ ವಿವಿಧ ಕಡೆಗಳಲ್ಲಿ ಇಂದು 1272 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿದ್ದು ಇಂದು ಕೋವಿಡ್ ಸೋಂಕಿಗೆ ಸಂಬಂಧಿಸಿ 07 ಸಾವು ಸಂಭವಿಸಿದೆ.
Related Articles
Advertisement
ಇಂದು ರಾಜ್ಯಾದ್ಯಂತ 145 ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.
ರಾಜ್ಯದಲ್ಲಿಂದು ಕೋವಿಡ್ 19 ಸೋಂಕಿಗೆ 07 ಜನ ಬಲಿಯಾಗಿದ್ದಾರೆ. ಬೆಂಗಳೂರು ನಗರ ಹಾಗೂ ಬೀದರ್ ಜಿಲ್ಲೆಗಳಲ್ಲಿ ತಲಾ 02 ಸಾವು, ಬೆಳಗಾವಿ, ದಕ್ಷಿಣ ಕನ್ನಡ ಮತ್ತು ಹಾಸನ ಜಿಲ್ಲೆಗಳಲ್ಲಿ ತಲಾ 01 ಸಾವು ವರದಿಯಾಗಿದೆ.
ರಾಜ್ಯದಲ್ಲಿ ಜುಲೈ 01 ಬುಧವಾರದವರೆಗೆ 16514 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲುಗೊಂಡಿದೆ. ಮತ್ತು ಇವರಲ್ಲಿ 8063 ಸೋಂಕಿತರು ಗುಣಮುಖರಾಗಿದ್ದಾರೆ ಹಾಗೂ 8194 ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿ ಒಟ್ಟಾರೆಯಾಗಿ ಇದುವರೆಗೆ 253 ಜನ ಕೋವಿಡ್ 19 ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ. ಹಾಗೂ 4 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 292 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಇಂದೂ ಸಹ ಬೆಂಗಳೂರು ನಗರ ಜಿಲ್ಲೆಯಲ್ಲೇ ಅತೀ ಹೆಚ್ಚಿನ ಕೋವಿಡ್ 19 ಸೋಂಕಿತರು ಪತ್ತೆಯಾಗಿದ್ದಾರೆ. ಇಲ್ಲಿ ಇಂದು 735 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ಬಳ್ಳಾರಿ – 85, ದಕ್ಷಿಣ ಕನ್ನಡ – 84, ಬೆಂಗಳೂರು ಗ್ರಾಮಾಂತರ – 29, ವಿಜಯಪುರ – 28, ಹಾಸನ – 28, ಉತ್ತರ ಕನ್ನಡ – 23, ಉಡುಪಿ – 22, ಚಾಮರಾಜನಗರ – 21, ಬಾಗಲಕೋಟೆ – 20, ತುಮಕೂರು – 19, ದಾವಣಗೆರೆ – 16, ಚಿಕ್ಕಬಳ್ಳಾಪುರ – 15, ಕಲಬುರಗಿ – 14, ರಾಮನಗರ – 14, ಕೊಪ್ಪಳ – 13, ರಾಯಚೂರು – 12 ಮತ್ತು ಚಿತ್ರದುರ್ಗ – 12 ಇವಿಷ್ಟು ಜಿಲ್ಲೆಗಳಲ್ಲಿ ಇಂದು ಎರಡಂಕೆಯ ಕೋವಿಡ್ 19 ಸೋಂಕು ಪತ್ತೆಯಾಗಿದೆ.
ರಾಜ್ಯದಲ್ಲಿ ಅತೀ ಹೆಚ್ಚಿನ ಕೋವಿಡ್ ಸೋಂಕಿತರೂ ಸಹ ಬೆಂಗಳೂರು ನಗರ ಜಿಲ್ಲೆಯಲ್ಲಿದ್ದಾರೆ. ಇಲ್ಲಿ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 5290ಕ್ಕೆ ಏರಿಕೆಯಾಗಿದ್ದು, 543 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ 4649 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಕೋವಿಡ್ ಸಂಬಂಧಿತ 97 ಸಾವುಗಳು ಸಂಭವಿಸಿದೆ.
ಇನ್ನುಳಿದಂತೆ ಕಲಬುರಗಿಯಲ್ಲಿ ಒಟ್ಟು 1450 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 1103 ಪ್ರಕರಣಗಳು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 329 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ 18 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ.
ಇನ್ನು ಉಡುಪಿ ಜಿಲ್ಲೆಯಲ್ಲಿ 1228 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1058 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ 168 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಸೋಂಕು ಸಂಬಂಧಿ 2 ಸಾವುಗಳು ಸಂಭವಿಸಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 825 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲಾಗಿದ್ದು ಇವರಲ್ಲಿ 402 ಸೋಂಕಿತರು ಗುಣಮುಖರಾಗಿದ್ದಾರೆ. 408 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ ಕೋವಿಡ್ ಸಂಬಂಧಿತ 13 ಸಾವು ಸಂಭವಿಸಿದೆ.
ಯಾದಗಿರಿ ಜಿಲ್ಲೆಯಲ್ಲಿ 949 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 838 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 110 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 1 ಸಾವು ಸಂಭವಿಸಿದೆ.
ಇಂದು ರಾಜ್ಯದಲ್ಲಿ ಒಟ್ಟು 16670 ಮಾದರಿಗಳನ್ನು ತಪಾಸಣೆ ನಡೆಸಲಾಗಿದ್ದು ಇವುಗಳಲ್ಲಿ 15185 ವರದಿಗಳು ನೆಗೆಟಿವ್ ಬಂದಿದೆ ಮತ್ತು 1272 ಪ್ರಕರಣಗಳು ಪಾಸಿಟಿವ್ ಆಗಿವೆ. ರಾಜ್ಯದಲ್ಲಿ ಇಲ್ಲಿಯವರೆಗೆ ಒಟ್ಟು 637417 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು ಇವುಗಳಲ್ಲಿ 604822 ಮಾದರಿಗಳ ವರದಿ ನೆಗೆಟಿವ್ ಬಂದಿದೆ ಹಾಗೂ 16514 ವರದಿಗಳು ಪಾಸಿಟಿವ್ ಆಗಿವೆ.