Advertisement

ಕಾಲೇಜಿನ ಆವರಣದಲ್ಲೇ ವಿದ್ಯಾರ್ಥಿನಿಗೆ ಹೃದಯಾಘಾತ… ಆಸ್ಪತ್ರೆ ದಾರಿಯಲ್ಲೇ ಕೊನೆಯುಸಿರು

01:29 PM Jun 28, 2023 | Team Udayavani |

ಸೂರತ್: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಯುವಕರಿಂದ ಹಿಡಿದು ವೃದ್ಧರು ಇದಕ್ಕೆ ಬಲಿಯಾಗುತ್ತಿದ್ದಾರೆ. ಕರೋನಾ ಸಾಂಕ್ರಾಮಿಕದ ನಂತರ, ಅಂತಹ ಪ್ರಕರಣಗಳು ಹಠಾತ್ ಹೆಚ್ಚಾಗುತ್ತಿವೆ, ಇದರಲ್ಲಿ ಯುವಕರ ಪ್ರಮಾಣವೇ ಹೆಚ್ಚಾಗಿವೆ. ಅದರಂತೆ ಸೂರತ್ ನ ನವಸಾರಿಯ ಪರ್ತಪೋರ್ ಗ್ರಾಮದ ಕಾಲೇಜಿನಲ್ಲಿ 12ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ಆವರಣದಲ್ಲೇ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ನಡೆದಿದೆ.

Advertisement

ಮಾಹಿತಿಯ ಪ್ರಕಾರ, ನವಸಾರಿಯ ಪರ್ತಪೋರ್ ಗ್ರಾಮದ ಎಬಿ ಶಾಲೆಯಲ್ಲಿ 12 ನೇ ತರಗತಿಯಲ್ಲಿ ಓದುತ್ತಿದ್ದ ತನಿಶಾ, ಬೆಳಗಿನ ಜಾವಾ ಕಾಲೇಜಿಗೆ ಬಂದ ವೇಳೆ ಮೂರ್ಛೆ ಹೋಗಿದ್ದಳು. ಕೂಡಲೇ ಕಾಲೇಜಿನ ಸಿಬಂದಿಗಳು ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಅಷ್ಟೋತ್ತಿಗಾಗಲೇ ಬಾಲಕಿಯ ಹೃದಯ ಬಡಿತ ನಿಂತುಹೋಗಿತ್ತು. ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ ವೈದ್ಯರು ಬಾಲಕಿ ಮೃತಪಟ್ಟಿರುವುದಾಗಿ ಹೇಳಿದ್ದಾರೆ ಬಳಿಕ ಪೋಷಕರ ಒಪ್ಪಿಗೆಯ ಮೇರೆಗೆ ಮರಣೋತ್ತರ ಪರೀಕ್ಷೆ ನಡೆಸಿದ ವೇಳೆ ಬಾಲಕಿ ಹೃದಯಾಘಾತದಿಂದ ಮೃತಪಟ್ಟಿರುವುದು ದೃಢಪಟ್ಟಿದೆ.

ಇದನ್ನೂ ಓದಿ: ಪಿಕಪ್‌ ವಾಹನದಲ್ಲಿ ಅಕ್ರಮವಾಗಿ ಗೋ ಸಾಗಾಟ; ಬಿಜೆಪಿ ಕಾರ್ಯಕರ್ತರ ಮಿಂಚಿನ ಕಾರ್ಯಾಚರಣೆ

Advertisement

Udayavani is now on Telegram. Click here to join our channel and stay updated with the latest news.

Next