Advertisement

12ರಿಂದ ದ್ವೀತೀಯ ಪಿಯು ಪೂರಕ ಪರೀಕ್ಷೆ

04:36 PM Aug 09, 2022 | Team Udayavani |

ರಾಯಚೂರು: ಜಿಲ್ಲೆಯಲ್ಲಿ ಆ.12ರಿಂದ 25ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಕೇಂದ್ರದಲ್ಲಿ ಅಕ್ರಮ ಚಟುವಟಿಕೆ ಹಾಗೂ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಪರ ಜಿಲ್ಲಾಧಿಕಾರಿ ಡಾ| ಕೆ.ಆರ್‌. ದುರುಗೇಶ್‌ ಸೂಚಿಸಿದರು.

Advertisement

ನಗರದ ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಸೋಮವಾರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಕಲು ರಹಿತ ಪರೀಕ್ಷೆ ನಡೆಸಲು ಜಿಲ್ಲಾ ಮಟ್ಟದಲ್ಲಿ ಜಾಗೃತ ದಳ ನೇಮಿಸಲಾಗಿದೆ. ಈ ತಂಡ ಜಿಲ್ಲಾ ವ್ಯಾಪ್ತಿಯಲ್ಲಿನ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ವಹಿಸಲಿದೆ. ಪರೀ ಪರೀಕ್ಷಾ ಸಮಯದಲ್ಲಿ ಪರೀ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀ. ಪ್ರದೇಶ ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು ಎಂದರು.

ಪರೀಕ್ಷಾ ಸಿಬ್ಬಂದಿ ಕಡ್ಡಾಯವಾಗಿ ಗುರುತಿನ ಚೀಟಿ ಹೊಂದಿರಬೇಕು. ಪರೀಕ್ಷಾ ಮುಖ್ಯ ಅಧಿಕ್ಷಕರನ್ನು ಹೊರತುಪಡಿಸಿ ಇತರೆ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್‌ ತರುವಂತಿಲ್ಲ ಎಂದರು.

ಪ್ರಶ್ನೆ ಪತ್ರಿಕೆ ವಿತರಕರ ತಂಡ ಇಲಾಖೆಯಿಂದ ಸರಬರಾಜು ಮಾಡಿದ ಗೌಪ್ಯ ವಸ್ತುಗಳನ್ನು ಖಜಾನೆಯಲ್ಲಿ ಠೇವಣಿಸುವ ವೇಳೆ ಬಿಇಒಗಳು ಖಜಾನೆಯಲ್ಲಿ ಖುದ್ದಾಗಿ ಹಾಜರಿರಬೇಕು. ಆಯಾ ಪರೀಕ್ಷಾ ದಿನದಂದು ಸಕಾಲಕ್ಕೆ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಕಾರ್ಯವಾಗಬೇಕು. ಪರೀಕ್ಷಾ ಸಿಬ್ಬಂದಿ ಕೂಡ ಕಡ್ಡಾಯವಾಗಿ ಗುರುತಿನ ಚೀಟಿ ಹೊಂದಿರಬೇಕು. ಪರೀಕ್ಷಾ ಕೇಂದ್ರದಲ್ಲಿ ಕೋಣೆಗಳ ಮಾಹಿತಿ ಸೂಚನಾ ಫಲಕಗಳಲ್ಲಿ ಪ್ರಕಟಿಸಬೇಕು ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಾಜಶೇಖರ ಪಟಣ್ಣಶೆಟ್ಟಿ ಮಾತನಾಡಿ, ರಾಯಚೂರು-4, ಸಿಂಧನೂರು- 2, ಮಾನ್ವಿ-2, ಲಿಂಗಸುಗೂರು-2, ದೇವದುರ್ಗ-1 ಸೇರಿದಂತೆ ಒಟ್ಟು 11 ಪರೀಕ್ಷಾ ಕೇಂದ್ರ ಸ್ಥಾಪಿಸಲಾಗುವುದು. ಒಟ್ಟು 7,752 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ ಎಂದರು. ಈ ವೇಳೆ ಸಹಾಯಕ ಆಯುಕ್ತ ರಂಜನಿಕಾಂತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ| ಸುರೇಂದ್ರ ಬಾಬು, ತಹಶೀಲ್ದಾರ್‌ ಗಳಾದ ರಾಜಶೇಖರ ಪಾಟೀಲ್‌, ಶ್ರೀನಿವಾಸ್‌ ಚಾಪೆಲ್‌, ದೇವದುರ್ಗ ಬಿಇಒ ಆರ್‌. ಇಂದಿರಾ ಸೇರಿದಂತೆ ಇತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next