Advertisement

Delhi: ಕೋಚಿಂಗ್ ಸೆಂಟರ್ ಗೆ ನೀರು ನುಗ್ಗಿದ ಪ್ರಕರಣ… 13 ಅಕ್ರಮ ಕೋಚಿಂಗ್ ಸೆಂಟರ್‌ಗೆ ಬೀಗ

11:28 AM Jul 29, 2024 | Team Udayavani |

ನವದೆಹಲಿ: ಕಳೆದ ಶನಿವಾರ ದೆಹಲಿಯ ರಾಜೇಂದ್ರ ನಗರದಲ್ಲಿರುವ ರಾವ್ ಐಎಎಸ್ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆಗೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿ ದೆಹಲಿಯ ಮುನ್ಸಿಪಲ್ ಕಾರ್ಪೊರೇಶನ್ (MCD) ಅಕ್ರಮವಾಗಿ ನಡೆಸುತ್ತಿರುವ ಕೋಚಿಂಗ್ ಸೆಂಟರ್ ಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ.

Advertisement

ಅದರಂತೆ ಭಾನುವಾರ ಹಳೇ ರಾಜೇಂದ್ರ ನಗರ ಪ್ರದೇಶ ಸುತ್ತಮುತ್ತ ಕಟ್ಟಡಗಳ ನೆಲಮಾಳಿಗೆಯಲ್ಲಿ ನಿಯಮ ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವ ಅಕ್ರಮ ಕೋಚಿಂಗ್ ಸೆಂಟರ್ ಗಳ ವಿರುದ್ಧ ಕ್ರಮ ಜರುಗಿಸಲು ಮುಂದಾಗಿದ್ದು ಅದರಂತೆ ಭಾನುವಾರ ಸಂಜೆಯವರೆಗೆ ಕಾರ್ಯಾಚರಣೆ ನಡೆಸಿ ಸುಮಾರು ಹದಿಮೂರು ಕೋಚಿಂಗ್ ಸೆಂಟರ್ ಗಳನ್ನು ಸೀಲ್ ಮಾಡಿದೆ.

ಅಷ್ಟು ಮಾತ್ರವಲ್ಲದೆ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆಯಲ್ಲಿ ನೀರು ನುಗ್ಗಿ ಮೂವರು ಸಾವನ್ನಪ್ಪಿದ ಘಟನೆಯ ತನಿಖೆಗೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಲು ಎಂಸಿಡಿ ನಿರ್ಧರಿಸಿದೆ.

ಯಾವೆಲ್ಲಾ ತರಬೇತಿ ಕೇಂದ್ರಗಳಿಗೆ ಬೀಗ:
ಐಎಎಸ್ ಗುರುಕುಲ, ಚಾಹಲ್ ಅಕಾಡೆಮಿ, ಪ್ಲುಟಸ್ ಅಕಾಡೆಮಿ, ಸಾಯಿ ಟ್ರೇಡಿಂಗ್, ಐಎಎಸ್ ಸೇತು, ಟಾಪರ್ಸ್ ಅಕಾಡೆಮಿ, ದೈನಿಕ್ ಸಂವಾದ್, ಸಿವಿಲ್ಸ್ ಡೈಲಿ ಐಎಎಸ್, ಕೆರಿಯರ್ ಪವರ್, 99 ನೋಟ್ಸ್, ವಿದ್ಯಾ ಗುರು, ಗೈಡೆನ್ಸ್ ಐಎಎಸ್ ಸೇರಿದಂತೆ ‘ಈಸಿ ಫಾರ್ ಐಎಎಸ್’ ಕೋಚಿಂಗ್ ಸೆಂಟರ್ ಗೆ ಬೀಗ ಜಡಿಯಲಾಗಿದೆ.

Advertisement

ದೆಹಲಿ ಸರ್ಕಾರ ಹೊರಡಿಸಿದ ಹೇಳಿಕೆಯಲ್ಲಿ, ಈ ಕೋಚಿಂಗ್ ಸೆಂಟರ್‌ಗಳನ್ನು ನೆಲಮಾಳಿಗೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿ ನಡೆಸಲಾಗುತ್ತಿದ್ದು, ಅವುಗಳನ್ನು ಸ್ಥಳದಲ್ಲೇ ಸೀಲ್ ಮಾಡಿ ಈ ಸಂಸ್ಥೆಗಳ ಗೇಟ್‌ಗಳಿಗೂ ನೋಟಿಸ್‌ಗಳನ್ನು ಅಂಟಿಸಲಾಗಿದೆ ಎಂದು ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next