ಸಂದರ್ಶನದಲ್ಲಿ ನಗರದ ಅಪ್ಪಾ ಇನ್ಸಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಹಾಗೂ ಗೋದುತಾಯಿ ಮಹಿಳಾ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ 13 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಅಸೋಷಿಯೇಟ್ ಸಾಫ್ಟವೇರ್ ಇಂಜಿನಿಯರ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ಇದರಲ್ಲಿ ಒಂಭತ್ತು ಬಾಲಕಿಯರು ಹಾಗೂ ನಾಲ್ವರು ಬಾಲಕರು ಸೇರಿದ್ದಾರೆ.
Advertisement
ಆಯ್ಕೆಯಾದ ವಿದ್ಯಾರ್ಥಿಗಳು ಪ್ರತಿ ವರ್ಷ ಆರಂಭಿಕ 2.80 ಲಕ್ಷ ರೂ. ವೇತನ ಪಡೆಯಲಿದ್ದಾರೆ. ಬೆಂಗಳೂರಿನ ಎಂಫ್‌ಸಿಸ್ ಕಂಪನಿ ತಂಡವು ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಅಪ್ಪಾ ಇನ್ಸಿಟ್ಯೂಟ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ, ಗೋದುತಾಯಿ ಮಹಿಳಾ ಇಂಜಿನಿಯರಿಂಗ್ ಕಾಲೇಜು, ಬೀದರನ ಲಿಂಗರಾಜಪ್ಪ ಇಂಜಿನಿಯರಿಂಗ್ ಕಾಲೇಜು, ಯಾದಗಿರಿ ಜಿಲ್ಲೆಯ ಸುರಪುರದ ವೀರಪ್ಪನಿಷ್ಟಿ ಇಂಜಿನಿಯರಿಂಗ್ ಕಾಲೇಜಿನ ಮತ್ತು ದೊಡ್ಡಪ್ಪ ಅಪ್ಪ ಇನ್ಸಟ್ಯೂಟ್ ಆಫ್ ಮಾಸ್ಟರ್ ಆಫ್ ಕಂಪ್ಯೂಟರ್ ಅಫ್ಲಿಕೇಷನ್‌ನ 324ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಿದ್ದರು.
ಬೋಧಕ ಸಿಬ್ಬಂದಿಗಳನ್ನು ಶರಣಬಸವ ವಿಶ್ವವಿದ್ಯಾಲಯದ ಕುಲಾ ಧಿಪತಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಪರಮ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ. ಕುಲಪತಿ ಡಾ| ನಿರಂಜನ ನಿಷ್ಟಿ, ಸಮ ಕುಲಪತಿ ಡಾ| ವಿ.ಡಿ. ಮೈತ್ರಿ, ಕುಲಸಚಿವ ಡಾ| ಅನಿಲಕುಮಾರ ಬಿಡವೆ, ಡೀನ್ ಡಾ| ಲಿಂಗರಾಜ ಶಾಸ್ತ್ರೀ, ಗೋದುತಾಯಿ ಮಹಿಳಾ ಇಂಜಿನಿಯರಿಂಗ್ ಕಾಲೇಜಿನ ಡೀನ್ ಪ್ರೊ| ಲಕ್ಷ್ಮೀ ಮಾಕಾ, ಪ್ಲೇಸ್‌ಮೆಂಟ್ ಸೆಲನ ಶಿವುಕುಮಾರ ಕಾಗಿ ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.