Advertisement

ಚಿತ್ರದುರ್ಗ: 132 ಜನರಿಗೆ ಹೊಸದಾಗಿ ಕೋವಿಡ್ 19 ಸೋಂಕು

12:20 AM Aug 26, 2020 | Hari Prasad |

ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 132 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ.

Advertisement

ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 2,136 ಕ್ಕೆ ಏರಿಕೆಯಾದಂತಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 10, ಹಿರಿಯೂರು 24, ಚಳ್ಳಕೆರೆ 46, ಹೊಸದುರ್ಗ 30, ಮೊಳಕಾಲ್ಮುರು 19 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 03 ಸೇರಿದಂತೆ ಒಟ್ಟು 132 ಕೋವಿಡ್ 19 ಸೋಂಕಿನ ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲೆಯ ಹಲವೆಡೆ ಕೋವಿಡ್ ಸೋಂಕಿಗೆ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಂಗಳವಾರ ಇಬ್ಬರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಮಂಗಳವಾರ ಒಟ್ಟು 603 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 132 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 2,136 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 34 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 1,522 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 589 ಸಕ್ರಿಯ ಪ್ರಕರಣಗಳು ಇವೆ.

Advertisement

ಸದ್ಯ ಜಿಲ್ಲೆಯಲ್ಲಿ ಒಟ್ಟು 549 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 15,231 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.  ಈವರೆಗೆ 34,416 ಜನರ ಮಾದರಿ ಸಂಗ್ರಹಿಸಲಾಗಿದ್ದು, 30,487 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 1,405 ಜನರ ವರದಿ ಬರುವುದು ಬಾಕಿ ಇದೆ. 388 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next