Advertisement

134.72 ಕೋಟಿ ರೂ. ಬಜೆಟ್‌ಗೆ ಬುಡಾ ಅಸ್ತು

08:38 AM Jun 21, 2020 | Suhan S |

ಬಳ್ಳಾರಿ: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ 2020-21ನೇ ಸಾಲಿನ 134.72 ಕೋಟಿ ರೂಪಾಯಿ ಮೊತ್ತದ ಬಜೆಟ್‌ ಅನ್ನು ಅಧ್ಯಕ್ಷ ದಮ್ಮೂರು ಶೇಖರ್‌ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಮಂಡಿಸಲಾಯಿತು.

Advertisement

2020-21 ಸಾಲಿನ 134.72ಕೋಟಿ ರೂಪಾಯಿ ಮೊತ್ತದ ಬಜೆಟ್‌ ಅನ್ನು ಮಂಡನೆ ಮಾಡಲಾಯಿತು. ಈ ವರ್ಷದ ಉಳಿಕೆ ಮೊತ್ತ 9.35 ಕೋಟಿ ರೂಪಾಯಿಗಳು. ಗೋನಾಳ್‌ ಗ್ರಾಮದ ಹತ್ತಿರ 101.8 ಎಕರೆ ವಿಸ್ತೀರ್ಣದಲ್ಲಿ ಅಭಿವೃದ್ಧಿಪಡಿಸುತ್ತಿರುವ ವಸತಿ ಯೋಜನೆಗೆ 65 ಕೋಟಿ ರೂಪಾಯಿ ಮೀಸಲಿಡಲಾಗಿದೆ. ನಗರದಲ್ಲಿ ಕೊಳಚೆ ಪ್ರದೇಶಗಳ ನಿರ್ಮೂಲನೆಗೆ 0.77 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಕೆರೆ ಅಭಿವೃದ್ಧಿಗೆ 6.28 ಕೋಟಿ ರೂಪಾಯಿ ಮೀಸಲಿಡಲಾಗಿದೆ.

ಇನ್ನುಳಿದ 62.67 ಕೋಟಿ ರೂಪಾಯಿ ಮೊತ್ತದ ವಿವಿಧ ಪ್ರಮುಖ ಯೋಜನೆಗಳು ಅಂದರೆ ಮಹಾ ಯೋಜನೆಯಲ್ಲಿ ಉದ್ಯಾನವನ/ ಬಯಲು ಪ್ರದೇಶಗಳನ್ನು ಭೂ ಸ್ವಾಧೀನ ಪಡಿಸಿಕೊಳ್ಳುವುದು.ವಿವಿಧ ಬಡಾವಣೆಗಳಲ್ಲಿ ಜಿಮ್‌ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸುವುದು ಹಾಗೂ ಇನ್ನಿತರ ಪ್ರಮುಖ ಯೋಜನೆಗಳಿಗೆ ಬಜೆಟಿನಲ್ಲಿ ಅನುಮೋದನೆ ನೀಡಲಾಗಿದೆ.

ಈ ಸಂದರ್ಭದಲ್ಲಿ ಬಳ್ಳಾರಿ ನಗರದ ಶಾಸಕರಾದ ಜಿ.ಸೋಮಶೇಖರ್‌ ರೆಡ್ಡಿ, ವಿಧಾನ ಪರಿಷತ್‌ ಸದಸ್ಯರಾದ ಕೆ.ಸಿ. ಕೊಂಡಯ್ಯ, ಅಲ್ಲಂ ವೀರಭದ್ರಪ್ಪ ಹಾಗೂ ಬುಡಾ ಆಯುಕ್ತರಾದ ಈರಪ್ಪ, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಜಿ.ಕೆ.ರವಿಶಂಕರ್‌, ಪ್ರಾಧಿಕಾರದ ನಗರ ಯೋಜನಾ ಸದಸ್ಯರಾದ ಮಹಾನಗರ ಪಾಲಿಕೆಯ ಆಯುಕ್ತರಾದ ತುಷಾರಮಣಿ, ಪ್ರಾಧಿಕಾರದ ನಗರ ಯೋಜನಾ ಸದಸ್ಯರುಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು, ಕಾರ್ಯನಿರ್ವಾಹಕ ಅಭಿಯಂತರರು (ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ) ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next