ನವದೆಹಲಿ: ಗುರುವಾರ ಬೆಳಗ್ಗೆ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ದಟ್ಟವಾದ ಮಂಜು ಆವರಿಸಿದ್ದರಿಂದ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಾರಾಟ ನಡೆಸಬೇಕಿದ್ದ 134 ವಿಮಾನಗಳು ಹಾಗೂ 22 ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.
ದಟ್ಟವಾದ ಮಂಜಿನಿಂದಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ಸುಮಾರು 134 ವಿಮಾನಗಳ (ದೇಶೀಯ ಮತ್ತು ಅಂತರಾಷ್ಟ್ರೀಯ) ಆಗಮನ ಮತ್ತು ನಿರ್ಗಮನಗಳ ಮೇಲೆ ಪರಿಣಾಮ ಬೀರಿದೆ ಎಂದು ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅದರಂತೆ ರೈಲು ಪ್ರಯಾಣದ ಮೇಲು ಪರಿಣಾಮ ಬೀರಿದ್ದು ಕಡಿಮೆ ಗೋಚರತೆಯಿಂದಾಗಿ 22 ರೈಲುಗಳು ತಡವಾಗಿ ಓಡುತ್ತಿವೆ ಎಂದು ಭಾರತೀಯ ರೈಲ್ವೆ ತಿಳಿಸಿದೆ.
ಉತ್ತರ ಪ್ರದೇಶ, ಬಿಹಾರ, ರಾಜಸ್ಥಾನ, ಉತ್ತರಾಖಂಡ ಮತ್ತು ದೆಹಲಿ-ಎನ್‌ಸಿಆರ್‌ನಲ್ಲಿ ತಾಪಮಾನ ಕಡಿಮೆಯಾಗುತ್ತಿರುವುದರಿಂದ ಇಡೀ ಉತ್ತರ ಭಾರತವು ಶೀತ ಅಲೆಯನ್ನು ಎದುರಿಸುತ್ತಿದೆ ಅಲ್ಲದೆ ನಗರದಲ್ಲಿ ಕನಿಷ್ಠ ತಾಪಮಾನವು 6 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದ್ದರಿಂದ ರಾಷ್ಟ್ರ ರಾಜಧಾನಿಯಲ್ಲಿ ಶೀತ-ತರಂಗದ ಪರಿಸ್ಥಿತಿಗಳು ಮುಂದುವರಿದಿವೆ.
ವಿಮಾನ, ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾದ ಪರಿಣಾಮ ಪ್ರಯಾಣಿಕರು ತೊಂದರೆಗೆ ಒಳಗಾಗಿದ್ದಾರೆ..
ಇದನ್ನೂ ಓದಿ: Money Laundering Case: ಆರೋಪಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು ಉಲ್ಲೇಖ