Advertisement

ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸದ 134 ಶಾಸಕರು, 48 ಎಂಎಲ್‌ಸಿಗಳು

10:36 PM Jul 05, 2023 | Team Udayavani |

ಬೆಂಗಳೂರು: ಸ್ಪೀಕರ್‌, ಉಪಮುಖ್ಯಮಂತ್ರಿ ಸಹಿತ 134 ಶಾಸಕರು ಹಾಗೂ 48 ವಿಧಾನ ಪರಿಷತ್ತಿನ ಸದಸ್ಯರು ತಮ್ಮ ಆಸ್ತಿ ವಿವರವನ್ನು ಜೂ.30ರೊಳಗೆ ಲೋಕಾಯುಕ್ತಕ್ಕೆ ಸಲ್ಲಿಸದೆ ನಿಯಮ ಉಲ್ಲಂಘಿ ಸಿದ್ದಾರೆ.

Advertisement

ಆಸ್ತಿ ವಿವರ ಸಲ್ಲಿಸಲು ಜನಪ್ರತಿನಿಧಿಗಳು ನಿರ್ಲಕ್ಷಿಸುತ್ತಿರುವ ಕುರಿತು ಜೂನ್‌ 28ರಂದು “ಉದಯವಾಣಿ’ ವಿಶೇಷ ವರದಿ ಪ್ರಕಟಿಸಿತ್ತು.

ಸ್ಪೀಕರ್‌ ಯು.ಟಿ.ಖಾದರ್‌, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಕೃಷ್ಣಬೈರೇಗೌಡ, ರಾಮಲಿಂಗಾ ರೆಡ್ಡಿ, ಈಶ್ವರ ಖಂಡ್ರೆ, ದಿನೇಶ್‌ ಗುಂಡೂರಾವ್‌, ಜಮೀರ್‌ ಅಹಮ್ಮದ್‌, ಎಚ್‌.ಸಿ.ಮಹದೇವಪ್ಪ, ಕೆ.ಎಚ್‌.ಮುನಿಯಪ್ಪ, ಮಧು ಬಂಗಾರಪ್ಪ, ಮಂಕಾಳ ವೈದ್ಯ, ಎಸ್‌.ಎಸ್‌.ಮಲ್ಲಿಕಾರ್ಜುನ ಸಹಿತ ಒಟ್ಟು 15 ಸಚಿವರು ಆಸ್ತಿ ವಿವರ ಸಲ್ಲಿಸಿಲ್ಲ. 134 ವಿಧಾನಸಭೆಯ ಸದಸ್ಯರು ಮತ್ತು 48 ವಿಧಾನ ಪರಿಷತ್‌ ಸದಸ್ಯರು ಆಸ್ತಿ ವಿವರ ಸಲ್ಲಿಸದೆ ನಿಯಮ ಉಲ್ಲಂ ಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಕೆ.ಜೆ.ಜಾರ್ಜ್‌, ಆರ್‌.ವಿ.ದೇಶಪಾಂಡೆ, ಲಕ್ಷ್ಮೀ ಹೆಬ್ಟಾಳ್ಕರ್‌ ಸಹಿತ 90 ವಿಧಾನಸಭೆಯ ಸದಸ್ಯರು ಸಲ್ಲಿಸಿದ್ದಾರೆ. ನೈಜ ಹೋರಾಟಗಾರರ ವೇದಿಕೆಯ ಎಚ್‌.ಎಂ. ವೆಂಕಟೇಶ್‌ ಮಾಹಿತಿ ಹಕ್ಕು ಕಾಯ್ದೆಯಡಿ ನೀಡಿರುವ ದಾಖಲೆಗಳಿಂದ ಈ ಅಂಶ ಬೆಳಕಿಗೆ ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next