Advertisement

ಚಿಕ್ಕಬಳ್ಳಾಪುರ: 135 ಹೊಸ ಸೋಂಕಿತರು ಪತ್ತೆ, ಜಿಲ್ಲೆಯ ಸೋಂಕಿತರ ಸಂಖ್ಯೆ 850ಕ್ಕೆ ಏರಿಕೆ

06:00 PM Jul 19, 2020 | keerthan |

ಚಿಕ್ಕಬಳ್ಳಾಪುರ: ಆಂಧ್ರ ಪ್ರದೇಶ ರಾಜ್ಯದ ಗಡಿಗೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಹಾಮಾರಿ ಕೋವಿಡ್ ಸಂಕಟ ಮುಂದುವರೆದಿದ್ದು, ಭಾನುವಾರ 135 ಪ್ರಕರಣಗಳು ದೃಢವಾಗಿದೆ.

Advertisement

ಜಿಲ್ಲೆಯಲ್ಲಿ ಶನಿವಾರ 107 ಸೋಂಕು ಪ್ರಕರಣಗಳು ದೃಢವಾಗಿದ್ದವು. ಇಂದು ಮತ್ತೆ 135 ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಎರಡು ದಿನಗಳಿಂದ ಸೋಂಕಿತರ ಸಂಖ್ಯೆ ಸತತವಾಗಿ ಮೂರಂಕಿ ದಾಟಿದ್ದು ಕೋವಿಡ್ ಸೋಂಕಿತರ ಸಂಖ್ಯೆ ಕೆಲವೇ ದಿನಗಳಲ್ಲಿ ಸಾವಿರ ಗಡಿ ದಾಟುವ ಸಾಧ್ಯತೆ ದಟ್ಟವಾಗಿರುವುದು ಎದ್ದು ಕಾಣುತ್ತಿದೆ. ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 850ಕ್ಕೆ ತಲುಪಿದೆ.

ಹೊಸದಾಗಿ ಪತ್ತೆಯಾಗಿರುವ 135 ಹೊಸ ಪ್ರಕರಣಗಳ ಪೈಕಿ ಜಿಲ್ಲೆಯ ಬಾಗೇಪಲ್ಲಿ 14, ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 33, ಚಿಂತಾಮಣಿ ತಾಲೂಕಿನಲ್ಲಿ 28. ಗುಡಿಬಂಡೆ ತಾಲೂಕನಲ್ಲಿ 6, ಶಿಡ್ಲಘಟ್ಟ ತಾಲೂಕಿನಲ್ಲಿ 8, ಹಾಗೂ ಗೌರಿಬಿದನೂರು ತಾಲೂಕಿನಲ್ಲಿ ಬರೋಬರಿ 46 ಪಾಸಿಟಿವ್ ಪ್ರಕರಣಗಳು ಕಂಡು ಬಂದಿವೆ. ನಿತ್ಯ ಜಿಲ್ಲೆಯಲ್ಲಿ ಬೆರಳಣಿಕೆಷ್ಟು ಸಂಖ್ಯೆಯಲ್ಲಿ ಪತ್ತೆಯಾಗುತ್ತಿದ್ದ ಸೋಂಕಿತರ ಸಂಖ್ಯೆ ಈಗ ನೂರರ ಅಸುಪಾಸಿನಲ್ಲಿ ನಿತ್ಯ ಪತ್ತೆಯಾಗುತ್ತಿರುವುದು ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆತಂಕ ಮೂಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next