Advertisement

ಉಡುಪಿ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ 13937 ಹೆಕ್ಟೇರ್ ಬೆಳೆ ಹಾನಿ: ಸಚಿವೆ ಹೆಬ್ಬಾಳ್ಕರ್

10:18 AM Nov 01, 2023 | Team Udayavani |

ಉಡುಪಿ: ಮಳೆ ಕೊರತೆಯಿಂದ ಜಿಲ್ಲೆಯಲ್ಲಿ 13937 ಹೆಕ್ಟೇರ್ ಭತ್ತದ ಬೆಳೆ ಹಾನಿಯಾಗಿದ್ದು, 11.85 ಕೋಟಿ ರೂ. ಪರಿಹಾರ ಅನುದಾನಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

Advertisement

ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಲವು ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದರು.

ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಸಮ್ಮಾನ ನೆರವೇರಿಸಿದರು.

ಪೊಲೀಸ್ ಪಡೆ, ಎನ್ ಸಿಸಿ, ಕರಾವಳಿ ಕಾವಲು ಪಡೆ ಸೇರಿದಂತೆ 16 ತಂಡಗಳ ಪಥ ಸಂಚಲನ, ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Advertisement

ಶಾಸಕ ಯಶ್ ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಿಲಾವರ ಸುರೇಂದ್ರ ಅಡಿಗ, ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಎಸ್. ಪಿ. ಡಾ. ಅರುಣ್ ಕೆ., ಜಿಪಂ ಸಿಇಒ ಪ್ರಸನ್ನ ಎಚ್., ಅಪರ ಜಿಲ್ಲಾಧಿಕಾರಿ ಮಮತಾ ಜಿ.ಎಸ್ ಉಪಸ್ಥಿತರಿದ್ದರು.

ಇದನ್ನೂ ಓದಿ: Kannada Rajyotsava: ಕನ್ನಡ ನಮ್ಮೊಳಗೆ ಅಂತರ್ಗತವಾದಾಗಲೇ ನಿಜವಾದ ರಾಜ್ಯೋತ್ಸವ

Advertisement

Udayavani is now on Telegram. Click here to join our channel and stay updated with the latest news.

Next