Advertisement

14.13 ಕೋಟಿ ನಗದು ಜಪ್ತಿ

10:51 PM Apr 09, 2019 | Lakshmi GovindaRaju |

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಜಾರಿ ತಂಡಗಳು ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ 14.13 ಕೋಟಿ ನಗದು, 58.76 ಲಕ್ಷ ಮೌಲ್ಯದ ಮದ್ಯ, 6.42 ಲಕ್ಷ ಮೌಲ್ಯದ ಮಾದಕ ದ್ರವ್ಯ, 2.13 ಕೋಟಿ ರೂ. ಮೊತ್ತದ ಇತರೆ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿವೆ. ಈವರೆಗೆ ವಶಪಡಿಸಿಕೊಂಡ ಒಟ್ಟು ನಗದು 63.82 ಕೋಟಿ.

Advertisement

ಮುಖ್ಯವಾಗಿ ಏ.8ರಂದು ಬೆಳಗಾವಿ ಜಿಲ್ಲೆಯಲ್ಲಿ ಸ್ಟಾಟಿಕ್‌ ಸರ್ವಲೆನ್ಸ್‌ ತಂಡವು ಮಹಾರಾಷ್ಟ್ರ ಸಾರಿಗೆ ಸಂಸ್ಥೆ ಬಸ್‌12.94 ಲಕ್ಷ ನಗದು ವಶಪಡಿಸಿಕೊಂಡಿದೆ. ಮೈಸೂರಿನಲ್ಲಿ 20 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದ್ದು, ಅದರ ಬಗ್ಗೆ ತನಿಖೆ ನಡೆಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next