Advertisement

ಶಿವರಾತ್ರಿ ಮೆರವಣಿಗೆ ವೇಳೆ ದುರಂತ… ವಿದ್ಯುತ್ ಸ್ಪರ್ಶಿಸಿ 14 ಮಕ್ಕಳಿಗೆ ಸುಟ್ಟ ಗಾಯ

03:23 PM Mar 08, 2024 | Team Udayavani |

ರಾಜಸ್ಥಾನ: ಮಹಾಶಿವರಾತ್ರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಹದಿನಾಲ್ಕು ಮಕ್ಕಳು ಗಾಯಗೊಂಡಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಘಟನೆಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಹೀರಾಲಾಲ್ ನಗರ್ ತಿಳಿಸಿದ್ದಾರೆ.

ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ. ಘಟನೆಯಿಂದಾಗಿ ಆಸ್ಪತ್ರೆ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ.

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜಸ್ಥಾನದ ಇಂಧನ ಸಚಿವ ಹೀರಾಲಾಲ್ ನಗರ್ ಆಸತ್ರೆಗೆ ಭೇಟಿ ನೀಡಿ ಗಾಯಗೊಂಡ ಮಕ್ಕಳ ಸ್ಥಿತಿಗತಿ ವಿಚಾರಿಸಿದರು.

ಈ ವೇಳೆ ಮಾತನಾಡಿದ ಸಚಿವ ಹೀರಾಲಾಲ್ ನಗರ್ “ಇದೊಂದು ಅತ್ಯಂತ ದುಃಖಕರ ಘಟನೆ… ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬರಿಗೆ ಶೇಕಡಾ 100ರಷ್ಟು ಸುಟ್ಟ ಗಾಯಗಳಾಗಿವೆ. ಸಾಧ್ಯವಿರುವ ಎಲ್ಲ ಚಿಕಿತ್ಸೆ ನೀಡಲು ವಿಶೇಷ ತಂಡವನ್ನು ರಚಿಸಲಾಗಿದೆ. ಯಾವುದೇ ರೀತಿಯ ನಿರ್ಲಕ್ಷ್ಯ ಕಂಡುಬಂದಲ್ಲಿ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಹೇಳಿದರು.

Advertisement

ಹೈ-ಟೆನ್ಷನ್ ಓವರ್ ಹೆಡ್ ವಿದ್ಯುತ್ ತಂತಿ ಸ್ಪರ್ಶಗೊಂಡು ಹೆಚ್ಚಿನ ಅನಾಹುತ ಸಂಭವಿಸಿದೆ ಎಂದು ಹೇಳಲಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ.

ಇದನ್ನೂ ಓದಿ: ಶೀಘ್ರದಲ್ಲಿ ಎರಡನೇ ಪಟ್ಟಿ ಬಿಡುಗಡೆ, ಊಹಾಪೋಹಗಳಿಗೆ ಪ್ರತಿಕ್ರಿಯಿಸಲ್ಲ: ಸಚಿವ ಪ್ರಹ್ಲಾದ ಜೋಶಿ

Advertisement

Udayavani is now on Telegram. Click here to join our channel and stay updated with the latest news.

Next