ಧಾರವಾಡ: ಯೋಗೀಶಗೌಡ ಕೊಲೆ ಪ್ರಕರಣ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶಿಸಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ವಿನಯ್ ಕುಲಕರ್ಣಿ ವಿಚಾರಣೆ ನಡೆಸಿದ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.
ನ.9 ರ ವರೆಗೂ ಸಿಬಿಐ ವಶಕ್ಕೆ ನೀಡಿದ್ದ ಇಲ್ಲಿನ 3ನೇ ಜಿಲ್ಲಾ ಸತ್ರ ನ್ಯಾಯಾಲಯವು ಸೋಮವಾರ ಬೆಳಗ್ಗೆ 11.30 ಕ್ಕೆ ವಿನಯ್ ಕುಲಕರ್ಣಿ ಖುದ್ದು ಹಾಜರಾಗಲು ಸೂಚಿಸಿತ್ತು. ಅದರಂತೆ ಅವರನ್ನು ಧಾರವಾಡದ ನ್ಯಾಯಾಲಯಕ್ಕೆ ಕರೆ ತರಲು ಸಿದ್ದತೆ ಕೂಡ ಮಾಡಲಾಗಿತ್ತು. ಆದರೆ ಅವರ ಬೆಂಬಲಿಗರು ಅಪಾರ ಪ್ರಮಾಣದಲ್ಲಿ ಸೇರುವ ಸಾಧ್ಯತೆ ಇರುವುದರಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರನ್ನು ವಿಚಾರಣೆ ಮಾಡಲಾಯಿತು.
ಇದನ್ನೂ ಓದಿ:ವಿನಯ್ ಕುಲಕರ್ಣಿ ಪ್ರಕರಣವನ್ನು ಕಾಂಗ್ರೆಸ್ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ:ಜಗದೀಶ್ ಶೆಟ್ಟರ್
ಆದರೆ ಜಿಲ್ಲಾ ನ್ಯಾಯಾಲಯಕ್ಕೆ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು ಬಿಗಿ ಬಂದೋಬಸ್ತ್ ಮಾಡಲಾಗಿದೆ.