Advertisement

 14 ದಿನಗಳ ಕಾಲ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರಕ್ಕೆ ನಟಿ ರಾಗಿಣಿ

06:10 PM Sep 14, 2020 | keerthan |

ಬೆಂಗಳೂರು: ಮಾದಕ ದ್ರವ್ಯ ಪೂರೈಕೆ ಮತ್ತು ಸೇವನೆ ಪ್ರಕರಣದಲ್ಲಿ ಬಂಧಿತರಾಗಿರುವ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ವರದಿಯಾಗಿದೆ.

Advertisement

ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ಇಂದು ಎಲ್ಲಾ ಆರೋಪಿಗಳನ್ನು ಬೆಂಗಳೂರಿನ ಒಂದನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದರು. ಈ ವೇಳೆ ನಟಿ ರಾಗಿಣಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಯುವತಿಗೆ ಬಲವಂತವಾಗಿ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ; ಅಪ್ರಾಪ್ರ ಸೇರಿ ಮೂವರ ಬಂಧನ

ನ್ಯಾಯಾಂಗ ಬಂಧನ ವಿಧಿಸಿರುವ ಕಾರಣ ನಟಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗ್ರಹದಲ್ಲಿ ಸೆಪ್ಟೆಂಬರ್ 27 ರವರೆಗೆ ಇರಬೇಕಾಗುತ್ತದೆ.

ಇದೇ ವೇಳೆ ಪ್ರಕರಣದ ಆರೋಪಿ-4 ಆಗಿರುವ ಪ್ರಶಾಂತ್ ರಂಕಾಗೂ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎನ್ನಲಾಗಿದೆ.

Advertisement

ಡ್ರಗ್ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಸಿಬಿ ಪೊಲೀಸರು ರಾಗಿಣಿ ಮತ್ತು ಸಂಜನಾ ಮನೆಗೆ ದಾಳಿ ನಡೆಸಿ ಪರಿಶೀಲನೆ ಮಾಡಿದ ಬಳಿಕ ಅವರನ್ನು ಬಂಧಿಸಿದ್ದರು.

ಇದನ್ನೂ ಓದಿ: ನಟಿ ಸಂಜನಾ ಗಲ್ರಾನಿ ಮತ್ತೆ ಮೂರು ದಿನ ಸಿಸಿಬಿ ಪೊಲೀಸರ ವಶಕ್ಕೆ ನೀಡಿದ ಕೋರ್ಟ್

Advertisement

Udayavani is now on Telegram. Click here to join our channel and stay updated with the latest news.

Next