Advertisement
ಪ್ರಾಥಮಿಕ ವರದಿಗಳ ಪ್ರಕಾರ, ಮೃತರಲ್ಲಿ 14 ವರ್ಷದ ಅಪ್ರಾಪ್ತ ವಯಸ್ಕ, ಉಳಿದ 13 ಮಂದಿ 20 ವರ್ಷಕ್ಕಿಂತ ಮೇಲ್ಪಟ್ಟವರು. ಜುಲೈ 15 ಮತ್ತು 31 ರ ನಡುವೆ 13 ಮಂದಿ ಸಾವನ್ನಪ್ಪಿದ್ದು, 8 ಮಹಿಳೆಯರು ಮತ್ತು 5 ಪುರುಷರು ಸೇರಿದ್ದಾರೆ ಜುಲೈ 1 ಮತ್ತು 15 ರ ನಡುವೆ ಒಬ್ಬರು ಸಾವನ್ನಪ್ಪಿದ್ದರು ಎಂದು ತಿಳಿದು ಬಂದಿದೆ.
Related Articles
Advertisement
ದೆಹಲಿ ಸಚಿವೆ ಅತಿಶಿ, ಸಾವಿನ ಸಂಖ್ಯೆಯ ಬಗ್ಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದು, ಮ್ಯಾಜಿಸ್ಟ್ರೇಟ್ ತನಿಖೆಯನ್ನು ಪ್ರಾರಂಭಿಸಲು ಮತ್ತು 48 ಗಂಟೆಗಳಲ್ಲಿ ವರದಿಯನ್ನು ಸಲ್ಲಿಸುವಂತೆ ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಜನವರಿ 2024 ರಿಂದ ಆಶ್ರಯ ಮನೆಯಲ್ಲಿ 14 ಸಾವುಗಳು ಸಂಭವಿಸಿವೆ ಎಂದು ಅತಿಶಿ ಹೇಳಿದ್ದಾರೆ.
ನಿರ್ಲಕ್ಷ್ಯದಿಂದ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲು ಶಿಫಾರಸು ಮಾಡುವಂತೆ ಸಚಿವೆ ಕೋರಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
ನಿರ್ಲಕ್ಷ್ಯದಿಂದ ಯಾವುದೇ ಸಾವು ಸಂಭವಿಸಿದ್ದರೆ, ಅದರಲ್ಲಿ ಭಾಗಿಯಾಗಿರುವ ವ್ಯಕ್ತಿಯನ್ನು ಸುಮ್ಮನೆ ಬಿಡುವುದಿಲ್ಲ ಎಂದು ನಾನು ದೆಹಲಿಯ ಜನರಿಗೆ ಭರವಸೆ ನೀಡುತ್ತೇನೆ.ನಾವು ಮರಣೋತ್ತರ ಪರೀಕ್ಷೆಗಳ ವರದಿಗಾಗಿ ಕಾಯುತ್ತಿದ್ದೇವೆ ಮತ್ತು 24 ಗಂಟೆಗಳ ನಂತರ ಮ್ಯಾಜಿಸ್ಟ್ರಿಯಲ್ ವಿಚಾರಣೆಯ ಪ್ರಾಥಮಿಕ ವರದಿ ಹೊರಬರುತ್ತದೆ ಎಂದು ಸಚಿವೆ ಹೇಳಿದ್ದಾರೆ.
BJP VS AAP
ಪರಿಸ್ಥಿತಿ ಅವಲೋಕಿಸಲು ದೆಹಲಿ ಬಿಜೆಪಿಯ ತಂಡದು ಆಶಾ ಕಿರಣ್ ಆಶ್ರಯ ಮನೆಗೆ ತೆರಳಿದೆ. ನಮ್ಮ ಮಾಹಿತಿಯಂತೆ ನಿರಾಶ್ರಿತರಿಗೆ ಗಲೀಜು ನೀರು ಬರುತ್ತಿದೆ, ಊಟ ಸಿಗುತ್ತಿಲ್ಲ, ಚಿಕಿತ್ಸೆ ಸಿಗುತ್ತಿಲ್ಲ, ಈ ಬಗ್ಗೆ ತನಿಖೆ ನಡೆಸಿ, ಇದರಲ್ಲಿ ಭಾಗಿಯಾದ ಎಲ್ಲ ಅಧಿಕಾರಿಗಳನ್ನು ಶಿಕ್ಷಿಸಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ರೇಖಾ ಗುಪ್ತಾ ಹೇಳಿಕೆ ನೀಡಿದ್ದಾರೆ.
ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ದೆಹಲಿ ಸಚಿವ ಗೋಪಾಲ್ ರಾಯ್, ಮಯೂರ್ ವಿಹಾರ್‌ನ ಚರಂಡಿಯಲ್ಲಿ ಮುಳುಗಿ ಸಾವನ್ನಪ್ಪಿದ ತಾಯಿ ಮತ್ತು ಮಗನ ಮನೆಗೆ ಬಿಜೆಪಿ ನಾಯಕರು ಭೇಟಿ ನೀಡಲಿಲ್ಲ ಎಂದು ತಿರುಗೇಟು ನೀಡಿದ್ದಾರೆ.