ಬಾಂಗ್ಲಾದೇಶ: ಬಾಂಗ್ಲಾದೇಶದ ರಾಜಧಾನಿಯಾದ ಢಾಕಾ ದಲ್ಲಿರುವ ಏಳು ಅಂತಸ್ತಿನ ಕಟ್ಟಡದಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರ ಸಂಜೆ 4:50 ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು ಘಟನೆ ನಡೆದ ಸ್ಥಳಕ್ಕೆ ಐದು ಅಗ್ನಿಶಾಮಕ ವಾಹನಗಳು ಧಾವಿಸಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿವೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ಢಾಕಾ ವೈದ್ಯಕೀಯ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ.
ಸ್ಫೋಟದ ಕಾರಣ ತಿಳಿದು ಬಂದಿಲ್ಲ, ಆದರೆ ಕಟ್ಟಡದ ನೆಲಮಾಳಿಗೆಯಲ್ಲಿ ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಕಟ್ಟದಲ್ಲಿ ಬ್ಯಾಂಕ್ ಸೇರಿದಂತೆ ಹಲವು ವಾಣಿಜ್ಯ ಮಳಿಗೆಗಳಿದ್ದು ಸ್ಫೋಟದ ತೀವ್ರತೆಗೆ ಬ್ಯಾಂಕಿನ ಗಾಜುಗಳು ಒಡೆದು ಹೋಗಿವೆ ಮತ್ತು ರಸ್ತೆಯ ಎದುರುಬದಿಯಲ್ಲಿ ನಿಂತಿದ್ದ ವಾಹನಗಳಿಗೂ ಹಾನಿಯಾಗಿದೆ ಎಂದು ವರದಿಗಳು ತಿಳಿಸಿವೆ.
ಇದನ್ನೂ ಓದಿ: 3 ದಿನದಿಂದ ಹೊತ್ತಿ ಉರಿಯುತ್ತಿರುವ ಚಾರ್ಮಾಡಿ ಅರಣ್ಯ: ಬದುಕುಳಿಯಲು ಮನೆ ಬಳಿ ಬಂದ ಕಾಳಿಂಗ