Advertisement

ಉಡುಪಿ ಜಿಲ್ಲೆಯಲ್ಲಿ ಇಂದು 14 ಜನರಿಗೆ ಕೋವಿಡ್-19 ಸೋಂಕು ದೃಢ

06:04 PM Jun 25, 2020 | keerthan |

ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಇಂದು ಮತ್ತೆ 14 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇದರಿಂದ ಜಿಲ್ಲೆಯ ಕೋವಿಡ್-19 ಸೋಂಕಿತರ ಸಂಖ್ಯೆ 1116ಕ್ಕೆ ಏರಿಕೆಯಾಗಿದೆ.

Advertisement

ಜಿಲ್ಲೆಯಲ್ಲಿ ಇದುವರೆಗೆ 1020 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಬ್ಬರು ಸಾವನ್ನಪ್ಪಿದ್ದು, ಇನ್ನು 94 ಮಂದಿ ಕೋವಿಡ್ 19 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರದಿಂದ ಜಿಲ್ಲೆಗೆ ಬಂದವರಲ್ಲಿ ಹೆಚ್ಚಿನ ಪ್ರಮಾಣದ ಸೋಂಕು ಕಾಣಿಸಿಕೊಂಡಿದೆ. ಆದರೆ ಬಹುತೇಕರಲ್ಲಿ ರೋಗಲಕ್ಷಣಗಳು ಕಾಣಿಸಿಕೊಂಡಿಲ್ಲ. ಹಾಗಾಗಿ ಸೋಂಕಿತರು ಬೇಗನೇ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 13840 ಗಂಟಲು ದ್ರವ ಸ್ಯಾಂಪಲ್ ಪಡೆಯಲಾಗಿದ್ದು, ಅದರಲ್ಲಿ 12336 ವರದಿ ನೆಗೆಟಿವ್ ಆಗಿದೆ. 1116 ಪಾಸಿಟಿವ್ ವರದಿಯಾಗಿದ್ದು, ಇನ್ನೂ 388 ಸ್ಯಾಂಪಲ್ ಟೆಸ್ಟ್ ವರದಿ ಬಾಕಿ ಇದೆ.

Advertisement

Udayavani is now on Telegram. Click here to join our channel and stay updated with the latest news.

Next