ಉಡುಪಿ: ಬೈಂದೂರಿನ ಪೊಲೀಸ್ ಸಿಬ್ಬಂದಿ, ಶಿರೂರು ಸರ್ಕಾರಿ ಆಸ್ಪತ್ರೆಯೊಂದರ ಸಿಬ್ಬಂದಿ ಸೇರಿದಂತೆ ಉಡುಪಿ ಜಿಲ್ಲೆಯಲ್ಲಿ ಇಂದು 14 ಜನರಿಗೆ ಕೋವಿಡ್ ಸೋಂಕು ತಗಲಿರುವುದು ದೃಢವಾಗಿದೆ.
ಜಿಲ್ಲೆಯಲ್ಲಿ ಇಂದು 67 ಸ್ಯಾಂಪಲ್ ಗಳ ಪರೀಕ್ಷೆ ವರದಿ ಜಿಲ್ಲಾಡಳಿತದ ಕೈಸೇರಿದ್ದು, ಅದರಲ್ಲಿ 53 ಸ್ಯಾಂಪಲ್ ಗಳು ನೆಗೆಟಿವ್ ಬಂದಿದ್ದು, 14 ಜನರ ಸ್ಯಾಂಪಲ್ ಪಾಸಿಟಿವ್ ಆಗಿದೆ. ಇದರಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1077ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ 961 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದು, ಸದ್ಯ ಜಿಲ್ಲೆಯಲ್ಲಿ 114 ಸಕ್ರಿಯ ಸೋಂಕು ಪ್ರಕರಣಗಳಿವೆ.
ಇಂದಿನ ಸೋಂಕಿತರಲ್ಲಿ ಎಂಟು ಮಂದಿ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಇಬ್ಬರ ಸೋಂಕು ಸಂಪರ್ಕ ಪತ್ತೆ ಹಚ್ಚಲಾಗುತ್ತಿದ್ದು, ಸೋಂಕಿತ ಸಂಖ್ಯೆ 6843ರ ಸಂಪರ್ಕದಿಂದ ನಾಲ್ವರಿಗೆ ಸೋಂಕು ತಾಗಿರುವುದು ದೃಢವಾಗಿದೆ.
ರಾಜ್ಯದಲ್ಲಿಂದು 249 ಜನರಿಗೆ ಸೋಂಕು ದೃಢವಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 9399ಕ್ಕೆ ಏರಿಕೆಯಾಗಿದೆ. ಇಂದು 111 ಮಂದಿ ಗುಣಮುಖರಾಗಿದ್ದು, ಒಟ್ಟು 5730 ಮಂದಿ ಗುಣಮುಖರಾಗಿದ್ದಾರೆ. ಸದ್ಯ 3523 ಸಕ್ರಿಯ ಪ್ರಕರಣಗಳಿವೆ. ಇಂದು ಐವರು ಸೋಂಕಿತರು ಮರಣ ಹೊಂದಿದ್ದು, ಸೋಂಕಿನ ಕಾರಣದಿಂದ ಮೃತಪಟ್ಟವರ ಸಂಖ್ಯೆ 142 ಕ್ಕೆ ಏರಿಕೆಯಾಗಿದೆ. ನಾಲ್ವರು ಸೋಂಕಿತರು ಅನ್ಯ ಕಾರಣದಿಂದ ಸಾವನ್ನಪ್ಪಿದ್ದಾರೆ.