ಹೊಸದಿಲ್ಲಿ: ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಸರ್ಕಾರ ದುರುಪಯೋಗ ಪಡಿಸಿಕೊಂಡಿದೆ ಎಂದು ಆರೋಪಿಸಿ 14 ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿವೆ.
ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಯಂತಹ ಸಂಸ್ಥೆಗಳು ಬಿಜೆಪಿಯ ವಿರೋಧಿಗಳನ್ನು ಮಾತ್ರ ಗುರಿಯಾಗಿಸಿಕೊಂಡಿವೆ ಎಂದು ಈ ವಿಪಕ್ಷಗಳು ಹೇಳುತ್ತವೆ.
ಇತರ ಪಕ್ಷದಲ್ಲಿದ್ದವರು ಬಿಜೆಪಿಗೆ ಸೇರಿದ ನಂತರ ನಾಯಕರ ಮೇಲಿನ ಪ್ರಕರಣಗಳನ್ನು ಆಗಾಗ್ಗೆ ಕೈಬಿಡಲಾಗುತ್ತದೆ ಎಂದು ಆರೋಪಿಸಲಾಗಿದೆ.
ಆದರೆ ಬಿಜೆಪಿಯು ಇದನ್ನು ತಿರಸ್ಕರಿಸಿದೆ. ಈ ಸಂಸ್ಥೆಗಳು ಸ್ವತಂತ್ರವಾಗಿ ಕೆಲಸ ನಿರ್ವಹಿಸುತ್ತಿವೆ ಎಂದು ಹೇಳಿದೆ.
ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಜನತಾ ದಳ-ಯುನೈಟೆಡ್, ಭಾರತ್ ರಾಷ್ಟ್ರ ಸಮಿತಿ, ರಾಷ್ಟ್ರೀಯ ಜನತಾ ದಳ, ಸಮಾಜವಾದಿ ಪಕ್ಷ, ಶಿವಸೇನೆ (ಉದ್ಧವ್ ಠಾಕ್ರೆ ಬಣ), ನ್ಯಾಷನಲ್ ಕಾನ್ಫರೆನ್ಸ್, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ಎಡಪಕ್ಷಗಳು ಮತ್ತು ಡಿಎಂಕೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿವೆ.