ಮಧ್ಯಪ್ರದೇಶ: ಸೇತುವೆಯಿಂದ ಬಸ್ ಕೆಳಗೆ ಬಿದ್ದು 22 ಮಂದಿ ಸಾವನ್ನಪ್ಪಿರುವ ದುರಂತ ಘಟನೆ ಮಂಗಳವಾರ ಮಧ್ಯಪ್ರದೇಶದ ಖಾರ್ಗೋನ್ ನಲ್ಲಿ ನಡೆದಿದೆ.
ಇಂದೋರ್‌ಗೆ ತೆರಳುತ್ತಿದ್ದ ಬಸ್ ಸ್ಕಿಡ್ ಆಗಿ ಸೇತುವೆ ಕೆಳಕ್ಕೆ ಬಿದ್ದ ಪರಿಣಾಮ ಈ ಘಟನೆ ನಡೆದಿದೆ. ಬಸ್ ನಲ್ಲಿ ಒಟ್ಟು 50 ಮಂದಿ ಪ್ರಯಾಣಿಕರು ಪಯಣಿಸುತ್ತಿದ್ದರು. ಸದ್ಯ ಸ್ಥಳೀಯರ ಸಹಕಾರದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಶಿವರಾಜ್ ಸಿಂಗ್ ವರ್ಮಾ ಅವರು ಭೇಟಿ ನೀಡಿದ್ದಾರೆ. ಅಪಘಾತದ ನಂತರ, ಮಧ್ಯಪ್ರದೇಶ ಸರ್ಕಾರವು ಮೃತರ ಕುಟುಂಬ ಸದಸ್ಯರಿಗೆ 4 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ.
ಗಂಭೀರ ಗಾಯಗೊಂಡವರ ಚಿಕಿತ್ಸೆ 50 ರೂ.ಘೋಷಿಸಿದ್ದು, ಗಾಯಗೊಂಡವರಿಗೆ 25 ಸಾವಿರ ರೂ. ಘೋಷಿಸಿದೆ.