ರಾಂಚಿ: ಅಪಾರ್ಟ್ಮೆಂಟ್ ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ 14 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಜಾರ್ಖಂಡ್ ನ ಧನ್ ಬಾದ್ ನಲ್ಲಿ ಮಂಗಳವಾರ ಸಂಜೆ ( ಜ.31) ರಂದು ನಡೆದಿದೆ.
ಅಪಾರ್ಟ್ಮೆಂಟ್ ನಲ್ಲಿ ಮದುವೆ ಸಮಾರಂಭವೊಂದು ನೆರವೇರುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತು. ಚೆಲ್ಲಾಪಿಲ್ಲಿಯಾಗಿ ಜನ ಓಡಿದ್ದಾರೆ. ಅಗ್ನಿ ದುರಂತಕ್ಕೆ 10 ಮಹಿಳೆಯರು, 3 ಮಕ್ಕಳು ಸೇರಿ ಒಟ್ಟು 14 ಮಂದಿ ಮೃತಪಟ್ಟಿದ್ದಾರೆ. 12 ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಯಾವ ಕಾರಣದಿಂದ ಬೆಂಕಿ ಆಕಸ್ಮಿಕ ಉಂಟಾಗಿದೆ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ. ಬೆಂಕಿಯನ್ನು ನಂದಿಸಿ, ಗಾಯಗೊಂಡವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಗಾಯಳುಗಳು ಪಾರಾಗಿದ್ದಾರೆ.
ಘಟನೆಗೆ ಮುಖ್ಯಮಂತ್ರಿ ಹೇಮಂತ್ ಸೋರನ್ ಸಂತಾಪ ಸೂಚಿಸಿದ್ದಾರೆ.
Related Articles