ಜಾರ್ಕಂಡ್ : ಹದಿನಾಲ್ಕು ವರ್ಷದ ಬಾಲಕಿಯ ಶವವೊಂದು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಜಾರ್ಕಂಡ್ ನ ದುಮ್ಕಾ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು ನಿರ್ಜನ ಪ್ರದೇಶದಲ್ಲಿ ಯುವತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕಳೆದ ಮೂರು ದಿನಗಳಿಂದ ಬಾಲಕಿ ನಾಪತ್ತೆಯಾಗಿದ್ದು ಮನೆಮಂದಿ ಹುಡುಕಾಟ ನಡೆಸುತ್ತಿದ್ದರು, ಆದರೆ ಶನಿವಾರ ಗ್ರಾಮದ ನಿರ್ಜನ ಪ್ರದೇಶದಲ್ಲಿ ಶವ ಪತ್ತೆಯಾಗಿದೆ, ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ತಾನೇ ಬಾಲಕಿಯನ್ನು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
ಘಟನೆ ಕುರಿತು ವಿವರಿಸಿದ ಯುವಕ ತಾನು ಒಂದು ಕಟ್ಟಡ ನಿರ್ಮಾಣ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದು ಅಲ್ಲಿಗೆ ಆ ಬಾಲಕಿಯು ದಿನಗೂಲಿ ಕೆಲಸಕ್ಕೆ ಬರುತ್ತಿದ್ದು ಆಕೆಯನ್ನು ಪರಿಚಯ ಮಾಡಿಕೊಂಡು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗುವುದಿಲ್ಲ ಎಂದು ಹೇಳಿದ್ದಾನೆ ಇದ್ದಕ್ಕೆ ವಿರೋಧ ವ್ಯಕ್ತಪಡಿಸಿದಾಗ ಬಾಲಕಿಯನ್ನು ಕೊಂದು ಯುವತಿಯ ಶವವನ್ನು ಮರಕ್ಕೆ ನೇಣು ಬಿಗಿದ ರೀತಿಯಲ್ಲಿ ಹಗ್ಗದಿಂದ ನಿತಾಡಿಸಿದ್ದಾನೆ ಎಂದು ಹೇಳಿಕೊಂಡಿದ್ದಾನೆ.
ಈ ವೇಳೆ ಬಾಲಕಿಯ ಮರಣೋತ್ತರ ಪರೀಕ್ಷೆ ನಡೆಸಿದ ವೇಳೆ ಬಾಲಕಿ ನಾಲ್ಕು ತಿಂಗಳ ಗರ್ಭಿಣಿ ಎಂಬ ಆಘಾತಕಾರಿ ಸಂಗತಿ ಹೊರಬಿದ್ದಿದೆ.
ಇದನ್ನೂ ಓದಿ : ಪುತ್ತೂರು: ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಬಸ್‌ಗೆ ಗುದ್ದಿದ ಬೈಕ್; ಸವಾರ ಸ್ಥಳದಲ್ಲೇ ಸಾವು