ಮುಂಬೈ: ಟೀಂ ಇಂಡಿಯಾದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರು ಇಂಗ್ಲೆಂಡ್ ವಿರುದ್ಧ ಓಂದೇ ಓವರ್ ನಲ್ಲಿ ಆರು ಸಿಕ್ಸರ್ ಸಿಡಿಸಿದ ಸಾಧನೆಗೆ ಇಂದಿಗೆ 14 ವರ್ಷ ತುಂಬಿದೆ.
2007ರಲ್ಲಿ ನಡೆದ ಚೊಚ್ಚಲ ಟಿ20 ವಿಶ್ವಕಪ್ ಕೂಟದ ಲೀಗ್ ಹಂತದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತದ ಎಡಗೈ ಬ್ಯಾಟ್ಸಮನ್ ಯವರಾಜ್ ಸಿಂಗ್ ಐತಿಹಾಸಿಕ ದಾಖಲೆ ನಿರ್ಮಿಸಿದ್ದರು.
ಸ್ಟುವರ್ಟ್ ಬ್ರಾಡ್ ಎಸೆದ ಓವರ್ ನ ಎಲ್ಲಾ ಆರು ಎಸೆತಗಳನ್ನು ಯುವರಾಜ್ ಸಿಂಗ್ ಸಿಕ್ಸರ್ ಗೆ ಬಾರಿಸಿದ್ದರು. ಟಿ20 ಕ್ರಿಕೆಟ್ ನ ಮೊದಲ ಈ ಸಿಕ್ಸರ್ ದಾಖಲೆಗೆ ದಕ್ಷಿಣ ಆಫ್ರಿಕಾದ ಡರ್ಬನ್ ನಗರದ ಕಿಂಗ್ಸ್ ಮೇಡ್ ಅಂಗಳ ಸಾಕ್ಷಿಯಾಗಿತ್ತು.
ಇದನ್ನೂ ಓದಿ:ಮೊದಲ ಪಂದ್ಯದಲ್ಲೇ ಹೊಸ ದಾಖಲೆ ಬರೆಯಲಿದ್ದಾರೆ ಮುಂಬೈ ನಾಯಕ ರೋಹಿತ್
ಅಂದು ಯುವರಾಜ್ ಸಿಂಗ್ ಕೇವಲ 12 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಹೊಸ ದಾಖಲೆ ಬರೆದಿದ್ದರು. ಒಟ್ಟು 16 ಎಸೆತ ಎದುರಿಸಿದ್ದ ಯುವರಾಜ್ ಸಿಂಗ್ ಏಳು ಸಿಕ್ಸರ್ ಮತ್ತು ಮೂರು ಬೌಂಡರಿ ನೆರವಿನಿಂದ 58 ರನ್ ಗಳಿಸಿದ್ದರು.
ಅಂದು ಭಾರತ ನಾಲ್ಕು ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿದ್ದರೆ, ಗುರಿ ಬೆನ್ನತ್ತಿದ್ದ ಇಂಗ್ಲೆಂಡ್ ತಂಡ 20 ಓವರ್ ಗಳಲ್ಲಿ ಆರು ವಿಕೆಟ್ ಕಳೆದುಕೊಂಡು 200 ರನ್ ಮಾತ್ರ ಗಳಿಸಲು ಶಕ್ತವಾಗಿತ್ತು. ಭಾರತ 18 ರನ್ ಗಳ ಅಂತರದ ಗೆಲುವು ಸಾಧಿಸಿತ್ತು.