ರವಿವಾರ ಹೆಬ್ರಿ ತಾಲೂಕಿನ ಶಿವಪುರ ಗ್ರಾ.ಪಂ. ವ್ಯಾಪ್ತಿಯಲ್ಲಿ 560 ಲ.ರೂ. ವೆಚ್ಚದಲ್ಲಿ 4 ಕಿಂಡಿ ಅಣೆಕಟ್ಟುಗಳ ಕಾಮಗಾರಿ ಉದ್ಘಾಟಿಸಿ ಅವರು ಮಾತನಾಡಿದರು.
Advertisement
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹರಿದು ಸಮುದ್ರ ಸೇರುವ ನದಿಗಳ ನೀರನ್ನು ತಡೆದು ಕೃಷಿ, ಕುಡಿಯುವ ನೀರಿನ ಉದ್ದೇಶಕ್ಕೆ ಬಳಸಲು ಅನುಕೂಲವಾಗುವಂತೆ ಪಶ್ಚಿಮ ವಾಹಿನಿ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಿಸಿ, 1,400 ಕಿಂಡಿ ಅಣೆಕಟ್ಟು ನಿರ್ಮಿಸಲು ಸ್ಥಳ ಗುರುತಿಸಲಾಗಿದೆ. ಇದರಿಂದ ಈ ಭಾಗದಲ್ಲಿ ಅಂತರ್ಜಲ ವೃದ್ಧಿಯ ಜತೆಗೆ, ಮಣ್ಣಿನ ಫಲವತ್ತತೆಯೂ ಸಾಧ್ಯವಾಗಲಿದೆ ಎಂದು ಸಚಿವರು ತಿಳಿಸಿದರು. ರಾಜ್ಯದಲ್ಲಿ ನೀರು ಹರಿಯುವ ಹಳ್ಳಗಳಲ್ಲಿ ಶೇಖರಣೆಯಾಗುವ ಹೊಳು ತೆಗೆಯಲು ಯೋಜನೆ ರೂಪಿಸಲಾಗುವುದು ಎಂದರು.
ಡೀಮ್ಡ್ ಅರಣ್ಯ ಸಮಸ್ಯೆಗೆ ಸಂಬಂಧಿಸಿ ಈಗಾಗಲೇ ರಾಜ್ಯದಲ್ಲಿ 7.70 ಲಕ್ಷ ಹೆಕ್ಟೇರ್ ಭೂಮಿಯನ್ನು ಡೀಮ್ಡ್ ವ್ಯಾಪ್ತಿಯಿಂದ ಕೈಬಿಡುವಂತೆ ಸುಪ್ರೀಂ ಕೋರ್ಟ್‌ಗೆ ಅಫಿದವಿತ್ ಸಲ್ಲಿಸಲಾಗಿದೆ. ಈ ಭೂಮಿಯನ್ನು ಅರ್ಹ ಭೂ ರಹಿತರಿಗೆ ನೀಡಲಾಗುವುದು. ಈಗಾಗಲೇ ಅರಣ್ಯ ವ್ಯಾಪ್ತಿಯಲ್ಲಿನ ಸಣ್ಣ ಹಿಡುವಳಿದಾರರು ಮತ್ತು ಮನೆ ಕಟ್ಟಿಕೊಂಡಿರುವವರು ಎದುರಿಸುತ್ತಿರುವ ಡೀಮ್ಡ್ ಅರಣ್ಯದ ಸಮಸ್ಯೆ ಶೀಘ್ರದಲ್ಲಿ ಬಗೆಹರಿಯಲಿದೆ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು. ಡೀಮ್ಡ್ ಫಾರೆಸ್ಟ್‌ನಿಂದ ಈ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಈ ಬಗ್ಗೆ ಶೀಘ್ರದಲ್ಲಿ ಸರಕಾರ ಸುತ್ತೋಲೆ ಹೊರಡಿಸಲಿದೆ. ಜನರ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂದು ಸಚಿವ ಸುನಿಲ್‌ಕುಮಾರ್ ಭರವಸೆ ನೀಡಿದರು.