Advertisement

ರೈತರಿಗೆ ಈ ವರ್ಷ 14 ಸಾವಿರ ಕೋಟಿ ರೂ. ಬೆಳೆ ಸಾಲ

07:16 AM May 21, 2020 | Lakshmi GovindaRaj |

ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ರೈತರಿಗೆ ಸಹಕಾರ ಸಂಘಗಳ ಮೂಲಕ 14 ಸಾವಿರ ಕೋಟಿ ರೂ. ಬೆಳೆ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮ ಶೇಖರ್‌ ತಿಳಿಸಿದ್ದಾರೆ. ವಿಧಾನಸೌಧದಲ್ಲಿ  ಬುಧವಾರ ಡಿಸಿಸಿ ಬ್ಯಾಂಕ್‌ ಅಧ್ಯಕ್ಷರು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿ, ಅಗತ್ಯ ಇರುವ ಎಲ್ಲ ರೈತರಿಗೆ ಸಕಾಲದಲ್ಲಿ ಸಾಲ ನೀಡಲು ಜಿಲ್ಲಾ ಸಹಕಾರಿ ಬ್ಯಾಂಕ್‌ಗಳಿಗೆ ಸೂಚಿಸಲಾಗಿದೆ ಎಂದು  ಹೇಳಿದರು.

Advertisement

ಕಳೆದ ವರ್ಷ 13 ಸಾವಿರ ಕೋಟಿ ರೂ. ಸಾಲ ನೀಡಲಾಗಿತ್ತು. ಈ ವರ್ಷ 14 ಸಾವಿರ ಕೋಟಿ ರೂ. ಸಾಲ ನೀಡುವ ಗುರಿ ಹೊಂದಲಾಗಿದೆ. ಈಗಾಗಲೇ 1,35,977 ರೈತರಿಗೆ 916 ಕೋಟಿ ರೂ. ಸಾಲ ನೀಡಲಾಗಿದೆ. ರೈತರಿಗೆ ಸಾಲ ಹಾಗೂ  ಸವಲತ್ತು ಗಳ ವಿತರಣೆಯಲ್ಲಿ 2-3 ಜಿಲ್ಲೆಗಳು ಮಾತ್ರ ಶೇ.100 ಸಾಧನೆ ಮಾಡಿವೆ. ಉಳಿದ ಜಿಲ್ಲೆಗಳಲ್ಲಿ ಸಾಧನೆ ಕಡಿಮೆಯಿದ್ದು ಶೇ.100 ರಷ್ಟು ಸಾಧನೆ ಮಾಡಲು ಸೂಚನೆ ನೀಡಲಾಗಿದೆ ಎಂದರು. ಪರಿಶಿಷ್ಟ ಜಾತಿ ಮತ್ತು ಪಂಗಡದವರು  ಸೇರಿದಂತೆ ಎಲ್ಲ ವರ್ಗದವರಿಗೆ ಸಾಲದ ಸೌಲಭ್ಯ ತಲುಪಬೇಕು. ಹೊಸದಾಗಿ ರೈತರಿಗೆ ಸಾಲ ನೀಡಬೇಕು.

ಎಲ್ಲ ಡಿಸಿಸಿ ಬ್ಯಾಂಕ್‌ಗಳು ಇದನ್ನು ಪಾಲಿಸಬೇಕು ಎಂದು ನಿರ್ದೇಶನ ನೀಡಲಾಗಿದೆ. ಸ್ವ ಸಹಾಯ ಸಂಘಗಳಿಗೆ ಶೂನ್ಯ ಬಡ್ಡಿದರದಲ್ಲಿ  ಸಾಲ ವಿತರಣೆ ಮಾಡುತ್ತಿದ್ದು ಅವರು ಉತ್ತಮ ರೀತಿಯಲ್ಲಿ ಸದುಪಯೋಗಪಡಿಸಿಕೊಂಡು ಮರು ಪಾವತಿ ಮಾಡುತ್ತಿದ್ದಾರೆ. ಬಡವರ ಬಂಧು, ಕಾಯಕ ಯೋಜನೆಯಡಿ ಡಿಸಿಸಿ ಬ್ಯಾಂಕ್‌ಗಳಲ್ಲಿ ನೂರಕ್ಕೆ ನೂರರಷ್ಟು ಸಾಲ ಮರು ಪಾವತಿಯಾಗುತ್ತಿದೆ. ಅಂತಹವರಿಗೆ ಹೆಚ್ಚಿನ ಆದ್ಯತೆ 50 ನೀಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next